ಕಲಬುರಗಿ:ನಗರದಲ್ಲಿ ಕಲುಷಿತ ನೀರನ್ನು ಪೂರೈಸಲಾಗುತ್ತಿದೆ ಎಂದು ಆರೋಪಿಸಿ ಜೆಡಿಎಸ್ ಯುವ ಘಟಕದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಕಲಬುರಗಿ: ಕಲುಷಿತ ನೀರು ಪೂರೈಕೆ... ಮಹಾನಗರ ಪಾಲಿಕೆ ವಿರುದ್ಧ ಜೆಡಿಎಸ್ ಆಕ್ರೋಶ - ಜೆಡಿಎಸ್ ಯುವ ಘಟಕದ ನೇತೃತ್ವದಲ್ಲಿಪ್ರತಿಭಟನೆ
ಕಲಬುರಗಿಯಲ್ಲಿ ಕಲುಷಿತ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಜೆಡಿಎಸ್ ಯುವ ಘಟಕದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಕಲಬುರಗಿ
ವಾಟರ್ ಬಾಟಲಿಯಲ್ಲಿ ನೀರು ಹಿಡಿದುಕೊಂಡು ಬಂದ ಪ್ರತಿಭಟನಾಕಾರರು, ವಿವಿಧ ಬಡಾವಣೆಗಳಿಗೆ ಕೊಳಚೆ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಕೊರೊನಾದಂತಹ ಸಂದಿಗ್ಧ ಸಂದರ್ಭದಲ್ಲಿ ಬೇಜವಾಬ್ದಾರಿಯಿಂದ ವರ್ತನೆ ಮಾಡಲಾಗುತ್ತಿದೆ. ಕಲುಷಿತ ನೀರಿನಿಂದಾಗಿ ವಿವಿಧ ಕಾಯಿಲೆ ಹರಡೋ ಆತಂಕ ಎದುರಾಗಿದ್ದು, ಕೂಡಲೇ ಶುದ್ಧ ಕುಡಿಯುವ ನೀರು ಪೂರೈಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.