ಕಲಬುರಗಿ :ರೈತರಿಗೆ ಮಾರಕವಾಗಿರುವ ಕೃಷಿ ಕಾಯ್ದೆ ಹಿಂಪಡೆಯುವಂತೆ ಆಗ್ರಹಿಸಿ ನಾಳೆ ಕರೆಯಲಾಗಿರುವ ಭಾರತ ಬಂದ್ಗೆ ಬೆಂಬಲಿಸುವುದಾಗಿ ಜೆಡಿಎಸ್ ಮುಖಂಡ ಕೇದಾರಲಿಂಗಯ್ಯ ಹಿರೇಮಠ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತಿಹಾಸದಲ್ಲೇ ಹಿಂದೆಂದೂ ನಡೆಯದಂತಹ ಹೋರಾಟವನ್ನು ರೈತರು ಕೈಗೆತ್ತಿಕೊಂಡಿದ್ದಾರೆ. ರೈತರ ನ್ಯಾಯಯುತ ಬೇಡಿಕೆಯಾಗಿರುವ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ಮೂಲಕ ಕೇಂದ್ರ ಸರ್ಕಾರ ರೈತರ ಹೋರಾಟಕ್ಕೆ ಸ್ಪಂದಿಸಬೇಕೆಂದು ಆಗ್ರಹಿಸಿದರು.