ಕರ್ನಾಟಕ

karnataka

ETV Bharat / state

ಜೆಎನ್​ಯು ವಿದ್ಯಾರ್ಥಿಗಳ ಮೇಲಿನ ಹಲ್ಲೆ, ಶುಲ್ಕ ಏರಿಕೆ ಖಂಡಿಸಿ ಪ್ರತಿಭಟನೆ - ಕಲಬುರಗಿ ಜೆಎನ್​ಯು ವಿದ್ಯಾರ್ಥಿಗಳ ಪ್ರತಿಭಟನೆ

ವಸತಿ ನಿಲಯದ ಶುಲ್ಕ ಹೆಚ್ಚಳ ನೀತಿ ಬಡ ವಿದ್ಯಾರ್ಥಿಗಳಿಗೆ ಹೊರೆಯಾಗಲಿದೆ. ಆದ್ದರಿಂದ ಏಕಾಏಕಿ ಹೆಚ್ಚಿಸಿರುವ ವಸತಿ ನಿಲಯದ ಶುಲ್ಕವನ್ನು ಹಿಂಪಡೆದು, ಶಿಕ್ಷಣದ ಖಾಸಗೀಕರಣವನ್ನು ನಿಲ್ಲಿಸಬೇಕು. ಪ್ರತಿಭಟನೆ ವೇಳೆ ಬಂಧಿಸಲ್ಪಟ್ಟ ವಿದ್ಯಾರ್ಥಿಗಳನ್ನು ಕೂಡಲೇ ಬಿಡುಗಡೆ ಮಾಡಿ, ವಿದ್ಯಾರ್ಥಿಗಳ ಮೇಲೆ ಹಾಕಲಾದ ಮೊಕದ್ದಮೆಗಳನ್ನು ಹಿಂಪಡೆಯಬೇಕೆಂದು ಪ್ರತಿಭಟಿಸಲಾಯಿತು.

ಜೆಎನ್​ಯು ವಿದ್ಯಾರ್ಥಿಗಳ ಮೇಲಿನ ಹಲ್ಲೆ, ಶುಲ್ಕ ಹೇರಿಕೆ ಖಂಡಿಸಿ ಪ್ರತಿಭಟನೆ

By

Published : Nov 20, 2019, 1:40 PM IST

ಕಲಬುರಗಿ:ಜೆಎನ್​ಯು ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ಹಲ್ಲೆ ಖಂಡಿಸಿ ಹಾಗೂ ವಸತಿ ನಿಲಯದ ಶುಲ್ಕ ಹೆಚ್ಚಳ ವಿರೋಧಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಜೆಎನ್​ಯು ವಿದ್ಯಾರ್ಥಿಗಳ ಮೇಲಿನ ಹಲ್ಲೆ, ಶುಲ್ಕ ಏರಿಕೆ ಖಂಡಿಸಿ ಪ್ರತಿಭಟನೆ

ಜೆಎನ್​ಯು ವಿದ್ಯಾರ್ಥಿಗಳ ಪ್ರತಿಭಟನೆಗೆ ಬೆಂಬಲಿಸಿ ನಗರದ ಜಗತ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಹೋರಾಟಗಾರರು, ಶಿಕ್ಷಣ ಭಾರತ ದೇಶದಲ್ಲಿ ಹುಟ್ಟಿದ ಪ್ರತಿಯೊಬ್ಬ ಪ್ರಜೆಯ ಹಕ್ಕು. ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿ ಜೆಎನ್​ಯು ವಿದ್ಯಾರ್ಥಿಗಳಿಗೆ ಶಿಕ್ಷಣ ಹಕ್ಕು ಕಸಿದುಕೊಳ್ಳುವ ಹುನ್ನಾರ ನಡೆಸಿದೆ ಎಂದು ಆರೋಪಿಸಿದರು.

ವಸತಿ ನಿಲಯದ ಶುಲ್ಕ ಹೆಚ್ಚಳ ನೀತಿ ಬಡ ವಿದ್ಯಾರ್ಥಿಗಳಿಗೆ ಹೊರೆಯಾಗಲಿದೆ. ಆದ್ದರಿಂದ ಏಕಾಏಕಿ ಹೆಚ್ಚಿಸಿರುವ ವಸತಿ ನಿಲಯ ಶುಲ್ಕವನ್ನು ಹಿಂಪಡೆದು, ಶಿಕ್ಷಣ ಖಾಸಗೀಕರಣವನ್ನು ನಿಲ್ಲಿಸಬೇಕು. ಪ್ರತಿಭಟನೆ ವೇಳೆ ಬಂಧಿಸಲ್ಪಟ್ಟ ವಿದ್ಯಾರ್ಥಿಗಳನ್ನು ಕೂಡಲೇ ಬಿಡುಗಡೆ ಮಾಡಿ, ವಿದ್ಯಾರ್ಥಿಗಳ ಮೇಲೆ ಹಾಕಲಾದ ಮೊಕದ್ದಮೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದರು.

For All Latest Updates

TAGGED:

ABOUT THE AUTHOR

...view details