ಕಲಬುರಗಿ:ವಿಧಾನಮಂಡಲ ಅಧಿವೇಶನದಲ್ಲಿ ವಿದ್ಯುನ್ಮಾನ ಮಾಧ್ಯಮಗಳಿಗೆ ನಿರ್ಬಂಧ ಹೇರಿದ ಸ್ಪೀಕರ್ ನಿರ್ಧಾರ ಖಂಡಿಸಿ ಪತ್ರಕರ್ತರು ಪ್ರತಿಭಟನೆ ನಡೆಸಿದರು.
ಕಲಬುರಗಿಯಲ್ಲಿ ಪತ್ರಕರ್ತರಿಂದ ಪ್ರತಿಭಟನೆ - protest by journalists
ವಿದ್ಯುನ್ಮಾನ ಮಾಧ್ಯಮಗಳಿಗೆ ವಿಧಾನಮಂಡಲ ಅಧಿವೇಶನದಲ್ಲಿ ನಿರ್ಬಂಧ ಹೇರಿರುವುದನ್ನು ವಿರೋಧಿಸಿ ಕಲಬುರಗಿಯಲ್ಲಿ ಪತ್ರಕರ್ತರು ಪ್ರತಿಭಟನೆ ನಡೆಸಿದರು. ಸರ್ಕಾರ ಮಾಧ್ಯಮಗಳ ಮೆಲಿನ ನಿರ್ಬಂಧವನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.
klb
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಪತ್ರಕರ್ತರು, ಸ್ಪೀಕರ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರ ಮಾಧ್ಯಮಗಳನ್ನು ಹತ್ತಿಕ್ಕುವ ಕಾರ್ಯ ಕೈಬಿಡಬೇಕು. ಮಾಧ್ಯಮಗಳ ಮೇಲಿನ ನಿರ್ಬಂಧ ಕೈಬಿಡಬೇಕೆಂದು ಆಗ್ರಹಿಸಿದರು.