ಕಲಬುರಗಿ:ಕೆಲ ವ್ಯತ್ಯಾಸಗಳಾಗಿದ್ದು, ಅವನ್ನ ಸರಿಪಡಿಸುತ್ತೇವೆ, ಬಿಜೆಪಿಯಲ್ಲಿ ಸರಿಪಡಿಸುವ ವ್ಯವಸ್ಥೆ ಇದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ನಗರದ ಏರ್‌ಪೋಟ್೯ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಸವಕಲ್ಯಾಣ ಉಪಚುನಾವಣೆ ಬಂಡಾಯ ಕುರಿತು ಸ್ಪಷ್ಟನೆ ನೀಡಿದರು. ಮೂರು ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲುತ್ತೆ, ಜನ ಬಿಜೆಪಿ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಕಾಂಗ್ರೆಸ್ನಲ್ಲಿ ಬೆಂಕಿಯೇ ಬಿದ್ದಿದ್ದು, ಅಲ್ಲಿ ಸರಿಪಡಿಸುವ ವ್ಯವಸ್ಥೆಯೇ ಇಲ್ಲ. ನಮ್ಮಲ್ಲಿ ಹೊಗೆ ಶುರುವಾಗಿದೆ ಅಷ್ಟೇ ಎಂದು ವ್ಯಂಗ್ಯವಾಡಿದರು.
ಸಿಡಿ ಪ್ರಕರಣದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿಯನ್ನ ಸರ್ಕಾರ ರಕ್ಷಣೆ ಮಾಡ್ತಿದೆ ಅನ್ನೋ ವಕೀಲ ಜಗದೀಶ್ ಆರೋಪ ವಿಚಾರ ಕುರಿತು ಪ್ರತಿಕ್ರಿಯಿಸಿದ ಕಟೀಲ್, ಪ್ರಕರಣ ಎಸ್‌ಐಟಿ ತನಿಖೆ ಹಂತದಲ್ಲಿರುವುದರಿಂದ,ನಾನು ಏನು ಮಾತಾಡೋದಿಲ್ಲ. ಎಸ್‌ಐಟಿ ಅಧಿಕಾರಿಗಳು ಸರಿಯಾಗಿ ತನಿಖೆ ನಡೆಸುತ್ತಿದ್ದಾರೆ ಎಂದಷ್ಟೇ ಹೇಳಿದರು.