ಕಲಬುರಗಿ: ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕು ತಗುಲಿ ಮೂವರು ಮೃತಪಟ್ಟಿದ್ದಾರೆ. ಇದರೊಂದಿಗೆ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 245ಕ್ಕೆ ಏರಿಕೆಯಾಗಿದೆ.
ಕಲಬುರಗಿಯಲ್ಲಿ 185 ಜನರಲ್ಲಿ ಸೋಂಕು ದೃಢ: ಮೂವರು ಬಲಿ - 185 people have corona
ಕಲಬುರಗಿ ಜಿಲ್ಲೆಯಲ್ಲಿ ಇಂದು 185 ಜನರಲ್ಲಿ ಕೊರೊನಾ ಸೋಂಕು ಕಂಡು ಬಂದಿದ್ದು, ಮೂವರು ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 14,616ಕ್ಕೆ ಏರಿಕೆಯಾಗಿದೆ.
ಕಲಬುರಗಿಯ ಮಿಲ್ಲತ್ ನಗರದ 58 ವರ್ಷದ ವ್ಯಕ್ತಿ, ಓಂ ನಗರದ 57 ವರ್ಷದ ವ್ಯಕ್ತಿ, ಹೈಕೋರ್ಟ್ ಬಳಿಯ ಶರಣ ಸಿರಸಗಿ ಮಡ್ಡಿ ಪ್ರದೇಶದ 65 ವರ್ಷದ ವೃದ್ದೆ ಸೋಂಕಿನಿಂದ ಮೃತಪಟ್ಟಿದ್ದಾರೆ. ಮಧುಮೇಹ, ಅಧಿಕ ರಕ್ತದೊತ್ತಡ ಹೃದ್ರೋಗ ಹಾಗೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಇವರಿಗೆ ಕೊರೊನಾ ಸೋಂಕು ತಗುಲಿದ ಪರಿಣಾಮ ತೀವ್ರ ಉಸಿರಾಟದ ಸಮಸ್ಯೆಯಾಗಿ ಮತಪಟ್ಟಿದ್ದಾರೆ.
ಇಂದು 185 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 14,616ಕ್ಕೆ ಏರಿಕೆಯಾಗಿದೆ. 209 ಜನರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 12,031ಕ್ಕೆ ಏರಿಕೆಯಾಗಿದೆ. 2,340 ಸಕ್ರೀಯ ಪ್ರಕರಣಗಳಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.