ಕಲಬುರಗಿ: ನಾಳೆ ಅಯೋಧ್ಯೆಯಲ್ಲಿ ನಡೆಯಲಿರುವ ಕಾರ್ಯಕ್ರಮದ ಹಿನ್ನೆಲೆ ಜಿಲ್ಲೆಯಾದ್ಯಂತ ಎರಡು ದಿನಗಳವರೆಗೆ 144 ನಿಷೇಧಾಜ್ಞೆ ಹಾಗೂ ಮದ್ಯ ಮಾರಾಟಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ಬಿ. ಶರತ್ ಆದೇಶ ಹೊರಡಿಸಿದ್ದಾರೆ.
ರಾಮಮಂದಿರ ಭೂಮಿ ಪೂಜೆ: 2 ದಿನಗಳ ಕಾಲ ಕಲಬುರಗಿ ಕಂಪ್ಲೀಟ್ ಬಂದ್ - Drinks ban in kalaburagi
ಅಯೋಧ್ಯೆಯಲ್ಲಿ ನಡೆಯಲಿರುವ ಕಾರ್ಯಕ್ರಮದ ಹಿನ್ನೆಲೆ, ಮುಂಜಾಗ್ರತಾ ಕ್ರಮವಾಗಿ ಕಲಂ 144 ಸಿಆರ್ ಪಿಸಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜಿಲ್ಲೆಯಾದ್ಯಂತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
![ರಾಮಮಂದಿರ ಭೂಮಿ ಪೂಜೆ: 2 ದಿನಗಳ ಕಾಲ ಕಲಬುರಗಿ ಕಂಪ್ಲೀಟ್ ಬಂದ್ Kalaburagi band](https://etvbharatimages.akamaized.net/etvbharat/prod-images/768-512-04:51:13:1596540073-kn-klb-04-ram-mandir-dist-144-wine-sale-ban-7208086-04082020164558-0408f-1596539758-212.jpg)
ನಾಳೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಲಿದ್ದು, ಮುಂಜಾಗ್ರತಾ ಕ್ರಮವಾಗಿ ಕಲಂ 144 ಸಿಆರ್ ಪಿಸಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜಿಲ್ಲೆಯಾದ್ಯಂತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಇಂದು ಮಧ್ಯಾಹ್ನ 3 ಗಂಟೆಯಿಂದ ಆಗಸ್ಟ್ 6 ರ ಬೆಳಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಇರಲಿದೆ. ಇಂದು ಮಧ್ಯಾಹ್ನ 3 ಗಂಟೆಯಿಂದಲೇ ಮದ್ಯ ಮಾರಾಟಕ್ಕೂ ಬ್ರೇಕ್ ಹಾಕಿದ್ದಾರೆ.
ನಿಷೇಧಾಜ್ಞೆ ವೇಳೆ ಗುಂಪು ಸೇರಲು ಸಂಭ್ರಮಾಚರಣೆ, ಮೆರವಣಿಗೆ ಮಾಡಲು ಅವಕಾಶವಿಲ್ಲ. ಸ್ಫೋಟಕ ವಸ್ತುಗಳ ಮಾರಾಟಕ್ಕೆ ಬ್ರೇಕ್ ಹಾಕಲಾಗಿದ್ದು, ಪಟಾಕಿ ಸಿಡಿಸುವ ಹಾಗಿಲ್ಲ. ಸಾರ್ವಜನಿಕರು ತಮ್ಮ-ತಮ್ಮ ಮನೆಗಳಲ್ಲಿಯೇ ಪೂಜೆ, ಸಂಭ್ರಮಾಚರಣೆ ಮಾಡಬಹುದು. ನಿಷೇಧಾಜ್ಞೆ ಸಮಯದಲ್ಲಿ ಕಾನೂನು ಉಲ್ಲಂಘನೆ ಮಾಡಿದರೆ ಅಂತವರ ವಿರುದ್ಧ ನಿರ್ದಾಕ್ಷಣ್ಯವಾಗಿ ಕಾನೂನು ಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿಗಳು ಖಡಕ್ ವಾರ್ನಿಂಗ್ ನೀಡಿದ್ದಾರೆ.