ಕಲಬುರಗಿ:ಸತತ ಐದನೇ ಬಾರಿಗೆ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಜಿಲ್ಲೆಯ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸೋಲಿಲ್ಲದ ಸರದಾರ ಎನಿಸಿಕೊಂಡಿದ್ದಾರೆ.
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಇಂಗಳಗಿ ಗ್ರಾ. ಪಂ. ವಾರ್ಡ್ ನಂ. 01 ರಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸುಭಾಷ್ ಚಂದ್ರ ಯಾಮೇರ್ ಅವರು ಐದನೇ ಬಾರಿ ಗೆಲುವು ಸಾಧಿಸಿದ್ದಾರೆ.