ಕರ್ನಾಟಕ

karnataka

ETV Bharat / state

ಕಲಬುರಗಿಯಲ್ಲಿ ಪಿಎಫ್‌ಐ ಜಿಲ್ಲಾಧ್ಯಕ್ಷ ಎಜಾಜ್ ಅಲಿ ವಶಕ್ಕೆ ಪಡೆದ ಎನ್‌ಐಎ - ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ

ದೇಶದಲ್ಲಿ ಎನ್​ಐಎ ದಾಳಿ ಮುಂದುವರಿದಿದೆ. ಕಲಬುರಗಿಯಲ್ಲಿ ಎನ್​ಐಎ ಅಧಿಕಾರಿಗಳು ಪಿಎಫ್ಐ ಜಿಲ್ಲಾಧ್ಯಕ್ಷ ಎಜಾಜ್​ ಅಲಿಯನ್ನು ವಶಕ್ಕೆ ಪಡೆದಿದ್ದಾರೆ.

Kalaburagi district PFI president  PFI president Ejaz Ali  PFI president Ejaz Ali in NIA custody  NIA raid in India  NIA raids at PFI offices in Karnataka  ED Raid on PFI  nia raids on PFI Leaders  NIA raids in Karnataka today  pfi raids news  ಎನ್​ಐಎ ವಶದಲ್ಲಿ ಪಿಎಫ್‌ಐ ಜಿಲ್ಲಾಧ್ಯಕ್ಷ ಎಜಾಜ್ ಅಲಿ  ದೇಶದಲ್ಲಿ ಎನ್​ಐಎ ದಾಳಿ  ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ  ಪ್ರತಿಭಟನೆ ಕೂಡ ನಡೆಸಿದ ಪಿಎಫ್ಐ ಕಾರ್ಯಕರ್ತರು
ಎನ್​ಐಎ ವಶದಲ್ಲಿ ಪಿಎಫ್‌ಐ ಜಿಲ್ಲಾಧ್ಯಕ್ಷ ಎಜಾಜ್ ಅಲಿ

By

Published : Sep 22, 2022, 11:05 AM IST

ಕಲಬುರಗಿ: ಶಿವಮೊಗ್ಗದಲ್ಲಿ ಬಂಧಿತರಾದ ಶಂಕಿತ ಉಗ್ರರು ಕಲಬುರಗಿಯ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಜೊತೆ ನಂಟು ಇಟ್ಟುಕೊಂಡಿದ್ದಾರಾ? ಎಂಬ ಶಂಕೆ ಕಾಡಲಾರಂಭಿಸಿದೆ. ಯಾಕಂದ್ರೆ ಕಳೆದ ರಾತ್ರಿ ಕಲಬುರಗಿಗೆ ಆಗಮಿಸಿದ್ದ ಎನ್‌ಐಎ ಅಧಿಕಾರಿಗಳ ತಂಡ ಇಬ್ಬರು PFI ಕಾರ್ಯಕರ್ತರನ್ನು ವಶಕ್ಕೆ ಪಡೆದು ಕರೆದೊಯ್ದಿದೆ ಎಂದು ತಿಳಿದುಬಂದಿದೆ.

ಎನ್​ಐಎ ವಶದಲ್ಲಿ ಪಿಎಫ್‌ಐ ಜಿಲ್ಲಾಧ್ಯಕ್ಷ ಎಜಾಜ್ ಅಲಿ

ರಾತ್ರಿಯಿಡೀ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಬೆಳಗ್ಗೆ ಪಿಎಫ್‌ಐ ಜಿಲ್ಲಾಧ್ಯಕ್ಷ ಎಜಾಜ್ ಅಲಿಯನ್ನು ವಶಕ್ಕೆ ಪಡೆದರು. ರಾತ್ರಿ ಇವರ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿತ್ತು. ಕೆಲ‌ ಮಹತ್ವದ ದಾಖಲಾತಿಗಳು ದೊರೆತಿವೆ ಎನ್ನಲಾಗುತ್ತಿದೆ. ಎನ್ಐಎ ಅಧಿಕಾರಿಗಳ ಕಾರ್ಯಾಚರಣೆಗೆ ಪಿಎಫ್ಐ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದ ಟಿಪ್ಪು ಸುಲ್ತಾನ್ ಚೌಕ್ ಬಳಿ ಪ್ರತಿಭಟನೆ ನಡೆಸಿದ ಪಿಎಫ್ಐ ಕಾರ್ಯಕರ್ತರು, 'ಗೋ ಬ್ಯಾಕ್.. ಗೋ ಬ್ಯಾಕ್..' ಎಂದು ಘೋಷಣೆ ಕೂಗಿದರು.

ಇದನ್ನೂ ಓದಿ:ದೇಶಾದ್ಯಂತ ಎನ್‌ಐಎ ದಾಳಿ: 100ಕ್ಕೂ ಹೆಚ್ಚು ಪಿಎಫ್‌ಐ ಕಾರ್ಯಕರ್ತರ ಬಂಧನ

ABOUT THE AUTHOR

...view details