ಕಲಬುರಗಿ:ಅತಿವೃಷ್ಟಿ ಪರಿಹಾರದಲ್ಲಿ ಸರ್ಕಾರ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ ಎಂದು ಸರ್ಕಾರದ ವಿರುದ್ಧ ಅಫಜಲಪುರ ಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರು ನಡು ರಸ್ತೆಯಲ್ಲಿ ಉರುಳು ಸೇವೆ ಮೂಲಕ ಪ್ರತಿಭಟನೆ ನಡೆಸಿದ್ದಾರೆ.
ಅತಿವೃಷ್ಟಿ ಪರಿಹಾರದಲ್ಲಿ ಸರ್ಕಾರ ತಾರತಮ್ಯ: ಜೆಡಿಎಸ್ ಪ್ರತಿಭಟನೆ - ಉರುಳು ಸೇವೆ
ಸರ್ಕಾರ ಅತಿವೃಷ್ಟಿ ಪರಿಹಾರದಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಜೆಡಿಎಸ್ ಕಾರ್ಯಕರ್ತರು ಅಫಜಲಪುರ ಪಟ್ಟಣದಲ್ಲಿ ಉರುಳು ಸೇವೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ.
ನಡು ರಸ್ತೆಯಲ್ಲಿ ಉರುಳು ಸೇವೆ ನಡೆಸಿದ ಜೆಡಿಎಸ್ ಕಾರ್ಯಕರ್ತರು, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ಮನೆಗಳಿಗೆ ನೀರು ನುಗ್ಗಿದರೆ 25 ಸಾವಿರ ರೂಪಾಯಿ ಪರಿಹಾರ ನೀಡಲಾಗುತ್ತಿದೆ. ಆದ್ರೆ ಕಲಬುರಗಿ ಜಿಲ್ಲೆಯಲ್ಲಿ ಮನೆಗಳಿಗೆ ನೀರು ನುಗ್ಗಿದರೆ ಕೇವಲ 10 ಸಾವಿರ ಪರಿಹಾರ ಘೋಷಿಸಲಾಗಿದೆ. ಬೆಳೆ ಹಾನಿ ಪರಿಹಾರ ವಿಷಯದಲ್ಲಿಯೂ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ. ರಾಜ್ಯ ಸರ್ಕಾರದಿಂದ ಪದೇ ಪದೇ ಮಲತಾಯಿ ಧೋರಣೆ ಮುಂದುವರೆದಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಸರ್ಕಾರದ ಕಾರ್ಯವೈಖರಿಗೆ ಆಕ್ರೋಶ ವ್ಯಕ್ತಪಡಿಸಿದ ಅವರು, ಕೂಡಲೇ ತಾರತಮ್ಯ ಸರಿಪಡಿಸುವಂತೆ ಆಗ್ರಹಿಸಿ ತಹಶೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿದರು.