ಕಲಬುರಗಿ: ಕೊರೊನಾ ಹರಡುವ ಶಂಕೆಯಿಂದ ವಿದೇಶದಿಂದ ಬಂದವರು ತಕ್ಷಣ ಜಿಲ್ಲಾಡಳಿತದ ಗಮನಕ್ಕೆ ತಂದು ತಪಾಸಣೆಗೆ ಒಳಗಾಗುವಂತೆ ಜಿಲ್ಲಾಧಿಕಾರಿ ಬಿ. ಶರತ್ ಸೂಚನೆ ನೀಡಿದ್ದಾರೆ.
ಕಲಬುರಗಿ-ಮಹಾರಾಷ್ಟ್ರ ರಸ್ತೆ ಸಂಚಾರ ಸಂಪೂರ್ಣ ಬಂದ್: ಜಿಲ್ಲಾಧಿಕಾರಿ ಆದೇಶ - ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಹೆಚ್ಚಳ
ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಹೆಚ್ಚಳವಾಗುತ್ತಿರುವ ಕಾರಣ ಕಲಬುರಗಿಯಿಂದ ಮಹಾರಾಷ್ಟ್ರಕ್ಕೆ ಹೋಗುವ ಸಾರಿಗೆ ಸಂಚಾರ ಸಂಪೂರ್ಣ ಬಂದ್ ಮಾಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
![ಕಲಬುರಗಿ-ಮಹಾರಾಷ್ಟ್ರ ರಸ್ತೆ ಸಂಚಾರ ಸಂಪೂರ್ಣ ಬಂದ್: ಜಿಲ್ಲಾಧಿಕಾರಿ ಆದೇಶ ಡಿಸಿ ಆದೇಶ](https://etvbharatimages.akamaized.net/etvbharat/prod-images/768-512-6461756-thumbnail-3x2-hggh.jpg)
ಡಿಸಿ ಆದೇಶ
ಕಳೆದೊಂದು ತಿಂಗಳಲ್ಲಿ ವಿದೇಶದಿಂದ ಬಂದವರು ಸ್ವಯಂಪ್ರೇರಿತರಾಗಿ ಇಎಸ್ಐ ಹತ್ತಿರದ ಆಸ್ಪತ್ರೆಗಳಿಗೆ ತೆರಳಿ ತಪಾಸಣೆ ಮಾಡಿಸಿಕೊಳ್ಳಬೇಕು. ಇಲ್ಲದಿದ್ರೆ ಕಾನೂನು ರೀತಿ ಕ್ರಮ ತೆಗೆದುಕೊಳ್ಳುವುದಾಗಿ ಖಡಕ್ ಆಗಿ ತಿಳಿಸಿದ್ದಾರೆ. ವಿದೇಶದಿಂದ ಬಂದ ಕೆಲವರು ಮಾಹಿತಿ ನೀಡದ ಕಾರಣ ಈ ಎಚ್ಚರಿಕೆ ನೀಡಲಾಗಿದೆ.
ನೆರೆ ರಾಜ್ಯ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ಒಂದಾದ ಮೇಲೊಂದರಂತೆ ಬೆಳಕಿಗೆ ಬರ್ತಿರುವುದರಿಂದ ಕಲಬುರಗಿಯಿಂದ ಮಹಾರಾಷ್ಟ್ರಕ್ಕೆ ಹೋಗುವ ರಸ್ತೆ ಸಾರಿಗೆ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ. ಖಾಸಗಿ ಬಸ್ ಸಂಚಾರ ಈಗಾಗಲೇ ಸ್ಥಗಿತಗೊಳಿಸಲಾಗಿದೆ.