ಕಲಬುರಗಿ:ನಗರದ ವಿಮಾನ ನಿಲ್ದಾಣ ಆವರಣದಲ್ಲಿದ್ದ ಸೇವಾಲಾಲ್ ಮತ್ತು ಮರಿಯಮ್ಮ ದೇವಸ್ಥಾನಗಳನ್ನು ಧ್ವಂಸ ಮಾಡಲಾಗಿದೆ ಎಂದು ಆರೋಪಿಸಿ ನಗರದ ಸರ್ದಾರ್ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ವಿಮಾನ ನಿಲ್ದಾಣಕ್ಕಾಗಿ ದೇವಾಲಯಗಳ ತೆರವು ಖಂಡಿಸಿ ಕಲಬುರಗಿಯಲ್ಲಿ ಪ್ರತಿಭಟನೆ - kalaburagi protest news
ಕಲಬುರಗಿ ವಿಮಾನ ನಿಲ್ದಾಣಕ್ಕಾಗಿ ದೇವಾಲಯವೊಂದನ್ನು ಧ್ವಂಸ ಮಾಡಿದ್ದಾರೆ ಎಂದು ಆರೋಪಿಸಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ವಿಮಾನ ನಿಲ್ದಾಣ ಪ್ರಾಧಿಕಾರದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ವಿಮಾನ ನಿಲ್ದಾಣಕ್ಕೆ ಜಮೀನು ನೀಡಿದ ಸಂದರ್ಭದಲ್ಲಿ ದೇವಸ್ಥಾನವನ್ನು ಅಲ್ಲಿಯೇ ಉಳಿಸಬೇಕೆಂಬ ಒಪ್ಪಂದದ ಮೇರೆಗೆ ಮಡಿಯಾಳ ತಾಂಡಾವನ್ನು ಸ್ಥಳಾಂತರಿಸಲಾಗಿತ್ತು. ಆದರೆ ಇದೀಗ ವಿಮಾನ ನಿಲ್ದಾಣ ಉದ್ಘಾಟನೆ ವೇಳೆ ದೇವಸ್ಥಾನ, ವಿಗ್ರಹ ಧ್ವಂಸ ಮಾಡಲಾಗಿದೆ. ಅಲ್ಲದೇ ವಿಗ್ರಹಗಳನ್ನು ನದಿಗೆ ಎಸೆಯಲಾಗಿದೆ. ಕೂಡಲೇ ದೇವಸ್ಥಾನ ಮರು ಸ್ಥಾಪನೆ ಮಾಡಬೇಕು. ನದಿಗೆ ಎಸೆಯಲ್ಪಟ್ಟ ಮೂರ್ತಿಗಳನ್ನೇ ತಂದು ಸ್ಥಾಪನೆ ಮಾಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಶಾಸಕ ಅವಿನಾಶ್ ಜಾಧವ್, ಮಾಜಿ ಸಚಿವ ರೇವುನಾಯಕ ಬೆಳಮಗಿ, ವಿವಿಧ ಮಠಾದೀಶರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.