ಕಲಬುರಗಿ :ಕಲ್ಯಾಣ ಕರ್ನಾಟಕದ ಪ್ರಸಿದ್ಧ ದೇವಸ್ಥಾನಗಳಲ್ಲಿ ಒಂದಾದ ಕಲಬುರಗಿಯ ಮಹಾದಾಸೋಹಿ ಶ್ರೀ ಶರಣಬಸವೇಶ್ವರರ ಜಾತ್ರಾ ಮಹೋತ್ಸವ ಭಾನುವಾರ ವೈಭವದಿಂದ ಜರುಗಿತು. ಶರಣರ 201ನೇ ಜಾತ್ರೋತ್ಸವದಲ್ಲಿ ಲಕ್ಷಾಂತರ ಭಕ್ತರು ಪಾಲ್ಗೊಂಡಿದ್ದರು. ಭಕ್ತರು ಖಾರಿಕು, ಬಾಳೆ ಹಣ್ಣುಗಳನ್ನು ರಥಕ್ಕೆ ಎಸೆದು ಭಕ್ತಿಭಾವ ಮೆರೆದರು.
ಸಂತಾನ ಭಾಗ್ಯ, ಕಂಕಣ ಭಾಗ್ಯ ಹಾಗು ಬೇಡಿದ್ದನ್ನು ಕರುಣಿಸುವ ಕಲ್ಯಾಣ ನಾಡಿನ ಜನರ ಆರಾಧ್ಯ ದೈವವೆಂದೇ ಶರಣಬಸವೇಶ್ವರರನ್ನು ಭಕ್ತರು ನಂಬುತ್ತಾರೆ. ಆಂಧ್ರ, ತೆಲಂಗಾಣ, ಮಹಾರಾಷ್ಟ್ರ ರಾಜ್ಯಗಳಿಂದಲೂ ಅಸಂಖ್ಯಾತ ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡಿದ್ದರು. ದೇವಸ್ಥಾನದ ಅಕ್ಕಪಕ್ಕದ ಕಟ್ಟಡಗಳ ಮೇಲೆ ಕುಳಿತ ಜನರು ಅಪಾಯ ಲೆಕ್ಕಿಸದೆ ರಥೋತ್ಸವ ಕಣ್ತುಂಬಿಕೊಂಡರು. ಇದಕ್ಕೂ ಮುನ್ನ ಶರಣ ಬಸವೇಶ್ವರ ದೇವಸ್ಥಾನ ಸಂಸ್ಥಾನದ ಪೀಠಾಧಿಪತಿ ಶ್ರೀ ಶರಣಬಸಪ್ಪ ಅಪ್ಪಾ ಪರಸು ಬಟ್ಟಲನ್ನು ಭಕ್ತರತ್ತ ಪ್ರದರ್ಶಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು.