ಕಲಬುರಗಿ:ನಗರದ ನೂರ್ ಬಾಗ್ ಪ್ರದೇಶದಲ್ಲಿ ಇಂದು ಮಧ್ಯಾಹ್ನ ನೆತ್ತರು ಹರಿದಿದೆ. ಕಾಲೇಜು ವಿದ್ಯಾರ್ಥಿಯೊಬ್ಬನ ಮೇಲೆ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಕಮರ್ ಕಾಲೋನಿಯ ನಿವಾಸಿ ಇತೇಷಾಮ್ (19) ಹಲ್ಲೆಗೊಳಗಾದ ವಿದ್ಯಾರ್ಥಿ. ಗಾಯಾಳುವನ್ನು ಮಣ್ಣೂರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಗರದ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದಲ್ಲಿ ಈತ ವ್ಯಾಸಂಗ ಮಾಡುತ್ತಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
ಕಲಬುರಗಿ: ವಿದ್ಯಾರ್ಥಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ - ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷ
ಹಾಡಹಗಲೇ ವಿದ್ಯಾರ್ಥಿಯ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆಗೈದು ಪರಾರಿಯಾಗಿರುವ ಘಟನೆ ಕಲಬುರಗಿ ನಗರದ ನೂರ್ ಬಾಗ್ ಪ್ರದೇಶದಲ್ಲಿ ನಡೆದಿದೆ.
![ಕಲಬುರಗಿ: ವಿದ್ಯಾರ್ಥಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ kalaburagi-a-student-was-attacked-by-criminals](https://etvbharatimages.akamaized.net/etvbharat/prod-images/768-512-17207459-thumbnail-3x2-sa.jpg)
ಕಲಬುರಗಿ: ಹಾಡಹಗಲೇ ಹರಿದ ನೆತ್ತರು.. ವಿದ್ಯಾರ್ಥಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ