ಕರ್ನಾಟಕ

karnataka

ETV Bharat / state

ಕಲಬುರಗಿ ಜಿಲ್ಲಾಸ್ಪತ್ರೆಯಿಂದ ಪರಾರಿಯಾಗಿದ್ದ ವಿಚಾರಣಾಧೀನ ಕೈದಿಯ ಬಂಧನ - ಆಸ್ಪತ್ರೆಯಿಂದ ಪರಾರಿಯಾಗಿದ್ದ ವಿಚಾರಣಾಧೀನ ಕೈದಿಯ ಬಂಧನ

ಆಸ್ಪತ್ರೆಯಿಂದ ತೆಲೆಮರೆಸಿಕೊಂಡಿದ್ದ ವಿಚಾರಣಾಧೀನ ಕೈದಿಯನ್ನು ಕಲಬುರಗಿ ರೈಲ್ವೆ ನಿಲ್ದಾಣದ ಬಳಿ ಪೊಲೀಸರು ಬಂಧಿಸಿದ್ದಾರೆ. ಮಜೀದ್ ಪರಾರಿಯಾಗಿದ್ದ ವಿಚಾರಣಾಧೀನ ಕೈದಿ.

Detention of prisoner  escaped from hospital
ಮಜೀದ್ ಪರಾರಿಯಾಗಿದ್ದ ವಿಚಾರಣಾಧೀನ ಕೈದಿ

By

Published : Feb 20, 2020, 4:39 PM IST

ಕಲಬುರಗಿ: ಆಸ್ಪತ್ರೆಯಿಂದ ಕಣ್ತಪ್ಪಿಸಿ ಪರಾರಿಯಾಗಿದ್ದ ವಿಚಾರಣಾಧೀನ ಕೈದಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.


ಮಜೀದ್ (24) ಪರಾರಿಯಾಗಿದ್ದ ವಿಚಾರಣಾಧೀನ ಕೈದಿ. ಅಂತರ್ ರಾಜ್ಯಗಳಲ್ಲಿ ಕಳ್ಳತನ, ದರೋಡೆ ಸೇರಿ ಹಲವು ಪ್ರಕರಣಗಳಲ್ಲಿ ಬಂಧಿಯಾಗಿದ್ದ ಮಜೀದ್​​ನನ್ನು ಅನಾರೋಗ್ಯದ ಹಿನ್ನೆಲೆ ಜೈಲಿನಿಂದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಫೆ. 16ರಂದು ರಾತ್ರಿ ಮೂತ್ರ ವಿಸರ್ಜನೆಗೆ ತೆರಳುತ್ತೇನೆ ಎಂದು ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಆಸ್ಪತ್ರೆಯಿಂದ ಪರಾರಿಯಾಗಿದ್ದ. ಈತನ ಬಂಧನಕ್ಕೆ ಎರಡು ತಂಡ ರಚಿಸಿದ್ದ ಪೊಲೀಸರು, ಇಂದು ಬೆಳಗ್ಗೆ ಕಲಬುರಗಿ ರೈಲ್ವೆ ನಿಲ್ದಾಣದ ಬಳಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಆರೋಪಿಯನ್ನು ನ್ಯಾಯಾಂಗದ ವಶಕ್ಕೆ ಒಪ್ಪಿಸಲಾಗಿದೆ.

ಈ ಕುರಿತು ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ABOUT THE AUTHOR

...view details