ಕರ್ನಾಟಕ

karnataka

ETV Bharat / state

ಪ್ಲಾಸ್ಟಿಕ್‌ ನಿರ್ಮೂಲನೆ ಮಾಡಿ: ಹಸಿರು ನಗರಕ್ಕಾಗಿ ಪಣತೊಟ್ಟ ಕಲಬುರಗಿ ಜಿಲ್ಲಾಡಳಿತ - kannada news paper

ಜಿಲ್ಲೆಯಲ್ಲಿ ಅತಿಯಾದ ಪ್ಲಾಸ್ಟಿಕ್​ ಬಳಕೆಯ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಕಲಬುರಗಿ ಜಿಲ್ಲಾಡಳಿತ ಮುಂದಾಗಿದ್ದು, ಇನ್ಮುಂದೆ ಮುಂದೆ ಪ್ಲಾಸ್ಟಿಕ್ ಬಳಕೆದಾರರಿಗೆ ಮತ್ತು ತಯಾರಿಕರಿಗೆ ಬಿಸಿ ಮುಟ್ಟಿಸಲು ಸಕಲ ಸಿದ್ಧತೆ ನಡೆಸಿದೆ.

ಕಲಬುರಗಿ ಜಿಲ್ಲಾಡಳಿತ

By

Published : Jul 25, 2019, 11:44 PM IST

ಕಲಬುರಗಿ :ಶರಣರ ನಾಡನ್ನುಹಸಿರು ನಗರವನ್ನಾಗಿಸಲು ಪಣ ತೊಟ್ಟಿರುವ ಜಿಲ್ಲಾಡಳಿತ ಪ್ಲಾಸ್ಟಿಕ್ ತಯಾರಿಕರ ಮೇಲೆ ಹದ್ದಿನ ಕಣ್ಣಿಟ್ಟಿದೆ.

ರಾಷ್ಟ್ರೀಯ ಹಸಿರು ನ್ಯಾಯಪೀಠ ನೀಡಿರುವ ನಿರ್ದೇಶನ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಆಗಸ್ಟ್ 15 ರೊಳಗಾಗಿ ಪ್ಲಾಸ್ಟಿಕ್ ಮಾರಾಟ ಮತ್ತು ಸಂಗ್ರಹಿಸುವ ವಾಣಿಜ್ಯ ಅಂಗಡಿ ಹಾಗೂ ಉತ್ಪಾದಕರ ಮೇಲೆ ದಾಳಿ ಮಾಡಿ ಗರಿಷ್ಠ ದಂಡ ವಿಧಿಸಿ ಶಿಕ್ಷೆಗೆ ಗುರಿಪಡಿಸುವಂತೆ ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ ಖಡಕ್ ಸೂಚನೆ ನೀಡಿದ್ದಾರೆ.

ನಗರದಲ್ಲಿ ಹೆಚ್ಚಾಗಿ ಪ್ಲಾಸ್ಟಿಕ್ ಬಳಸುವ ಹೋಟೆಲ್, ಕಲ್ಯಾಣ ಮಂಟಪ, ಧಾರ್ಮಿಕ ಸ್ಥಳಗಳ ಮೇಲೆ ದಾಳಿ ನಡೆಸಲು ಜಿಲ್ಲಾಡಳಿತ ಅಧಿಕಾರಿಗಳಿಗೆ ಸೂಚಿಸಿದೆ.

ಅಲ್ಲದೇ ಮುಂದಿನ ಒಂದು ವಾರದೊಳಗೆ ಪ್ಲಾಸ್ಟಿಕ್ ಮಾರಾಟ ಮತ್ತು ಉತ್ಪನ್ನ ಮಾಡುವವರ ಸಭೆ ನಡೆಸಿ ಪ್ಲಾಸ್ಟಿಕ್ ಬಳಸದಂತೆ ತಿಳಿಹೇಳಿ ಎಂದು ಅಧಿಕಾರಿಗಳು, ಸಿಬ್ಬಂದಿಗಳಿಗೆ ತಿಳಿಸಲಾಗಿದೆ. ಇದೇ ವೇಳೆ ಸಂಪೂರ್ಣವಾಗಿ ಪ್ಲಾಸ್ಟಿಕ್ ನಿಷೇಧಿಸಲು ಸಾರ್ವಜನಿಕರು ಕೈ ಜೊಡಿಸುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

ABOUT THE AUTHOR

...view details