ಕಲಬುರಗಿ:ಹಿಂದುಳಿದ ವರ್ಗದ ಬಗ್ಗೆ ಮಾತನಾಡಲು ಕಾಂಗ್ರೆಸ್ನವರಿಗೆ ನೈತಿಕತೆ ಇಲ್ಲ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಹಿಂದುಳಿದ ವರ್ಗದ ಬಗ್ಗೆ ಮಾತನಾಡಲು ಕಾಂಗ್ರೆಸ್ನವರಿಗೆ ನೈತಿಕತೆ ಇಲ್ಲ: ರವಿಕುಮಾರ್ - ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್
ಹಿಂದುಳಿದ ವರ್ಗಗಳಿಗೆ ಕಾಂಗ್ರೆಸ್ನವರು ಏನು ಮಾಡಿಲ್ಲ. ಪ್ರಧಾನಿ ಮೋದಿಯವರು ಹಿಂದುಳಿದ ವರ್ಗಗಳ ಆಯೋಗ ರಚಿಸಿದರು. ಹಿಂದುಳಿದ ವರ್ಗದ ಬಗ್ಗೆ ಮಾತನಾಡಲು ಕಾಂಗ್ರೆಸ್ನವರಿಗೆ ನೈತಿಕತೆ ಇಲ್ಲ ಎಂದು ಎನ್. ರವಿಕುಮಾರ್ ಗುಡುಗಿದರು.
ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್
ಕಲಬುರಗಿಯಲ್ಲಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳಿಗೆ ಕಾಂಗ್ರೆಸ್ನವರು ಏನೂ ಮಾಡಿಲ್ಲ. ಪ್ರಧಾನಿ ಮೋದಿಯವರು ಹಿಂದುಳಿದ ವರ್ಗಗಳ ಆಯೋಗ ರಚಿಸಿದರು. ಈ ವೇಳೆ ಕಾಂಗ್ರೆಸ್ಸಿಗರೇ ಆಯೋಗಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ನಾಯಕರು ಹಿಂದುಳಿದ ವರ್ಗಗಳ ವಿರೋಧಿಗಳು. ಹೀಗಾಗಿ ಅವರಿಗೆ ಹಿಂದುಳಿದ ವರ್ಗಗಳ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಹಿಂದುಳಿದ ವರ್ಗದ ಜನ ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
Last Updated : Apr 8, 2019, 6:13 PM IST