ಕರ್ನಾಟಕ

karnataka

ETV Bharat / state

'ಬಿಜೆಪಿಯ ಭ್ರಷ್ಟ ಆಡಳಿತದಿಂದ ಅಕ್ರಮ ಚಟುವಟಿಕೆಗಳ ತಾಣವಾಗಿದೆ ಕಲಬುರಗಿ' - kalburgi latest news

ಕಲಬುರಗಿ ಜಿಲ್ಲೆಯಲ್ಲಿ ಕೊರೊನಾ ಆತಂಕದ ನಡುವೆಯೇ ಲಾಕ್ ಡೌನ್ ಸಂದರ್ಭದಲ್ಲಿ 91.84 ಲಕ್ಷ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಗಾಂಜಾ ಮೌಲ್ಯವೇ ಇಷ್ಟಿರುವಾಗ ಅಕ್ರಮವಾಗಿ ಮಾರಾಟವಾದ ಗಾಂಜಾ ಎಷ್ಟಿರಬಹುದು ಎಂಬುದೇ ಊಹಿಸಲು ಅಸಾಧ್ಯ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

priyank kharge
ಶಾಸಕ ಪ್ರಿಯಾಂಕ್ ಖರ್ಗೆ

By

Published : Mar 6, 2021, 2:58 PM IST

ಕಲಬುರಗಿ: ಕಲಬುರಗಿಯಲ್ಲೇ ಹೆಚ್ಚು ಗಾಂಜಾ ಮಾರಾಟ ನಡೆಯುವುದೆಂಬ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ ಬೆನ್ನಲ್ಲೇ ಆಡಳಿತ ವ್ಯವಸ್ಥೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಮಾಜಿ ಸಚಿವ, ಶಾಸಕ ಪ್ರಿಯಾಂಕ್ ಖರ್ಗೆ, ಬಿಜೆಪಿ ಸರ್ಕಾರದ ಭ್ರಷ್ಟ ಆಡಳಿತದ ಫಲವಾಗಿ ಕಲಬುರಗಿ ಇಂದು ಅಕ್ರಮ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ ಎಂದು ಟೀಕಿಸಿದ್ದಾರೆ.

ಕಲಬುರಗಿ ಜಿಲ್ಲೆಯಲ್ಲಿ ಕೊರೊನಾ ಆತಂಕದ ನಡುವೆಯೇ ಲಾಕ್ ಡೌನ್ ಸಂದರ್ಭದಲ್ಲಿ 91.84 ಲಕ್ಷ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಗಾಂಜಾ ಮೌಲ್ಯವೇ ಇಷ್ಟಿರುವಾಗ ಅಕ್ರಮವಾಗಿ ಮಾರಾಟವಾದ ಗಾಂಜಾ ಎಷ್ಟಿರಬಹುದು ಎಂಬುದೇ ಊಹಿಸಲು ಅಸಾಧ್ಯ ಎಂದಿದ್ದಾರೆ.

ಗೃಹ ಸಚಿವರ ಹೇಳಿಕೆಯನ್ನು ಪ್ರಸ್ತಾಪಿಸಿರುವ ಪ್ರಿಯಾಂಕ್ ಖರ್ಗೆ ಐಪಿಎಲ್ ಬೆಟ್ಟಿಂಗ್, ಮಟ್ಕಾ ಹಾವಳಿಗೆ ಇಂದಿನ ಯುವಕರು ಬಲಿಯಾಗತೊಡಗಿದ್ದಾರೆ. ಇಂತಹ ಅಕ್ರಮ ಚಟುವಟಿಕೆಗಳು ವರ್ಷದಿಂದ ವರ್ಷಕ್ಕೆ ಬೆಳೆಯುತ್ತಲೇ ಇವೆ. ಬಿಜೆಪಿ ಸರ್ಕಾರದಲ್ಲೇ ಈ ಪ್ರಕರಣಗಳು ಹೆಚ್ಚಾಗಲು ಕಾರಣಗಳೇನು, ಇದರಲ್ಲಿ ಯಾರ ಕೈವಾಡವಿದೆ, ಸಿಎಂ ಯಡಿಯೂರಪ್ಪ ಹಾಗೂ ಗೃಹ ಸಚಿವರು ಈವರೆಗೆ ಯಾವ ಕ್ರಮವನ್ನೂ ಕೈಗೊಳ್ಳದಿರುವುದೇಕೆ ಎಂದು ಪ್ರಶ್ನಿಸಿದ್ದಾರೆ.

ಓದಿ:ಕೋರ್ಟ್ ಮೊರೆ ಹೋಗಿರುವ ಸಚಿವರ ಸಮಸ್ಯೆ ಅವರಿಗೇ ಗೊತ್ತು: ಡಿಕೆಶಿ

ಈಗಾಗಲೇ ಸರ್ಕಾರ ನಮ್ಮ ಜಿಲ್ಲೆಯಲ್ಲಿ ಇದ್ದ ಹಾಗೂ ಬರಬೇಕಿದ್ದ ಎಲ್ಲಾ ಸಂಪನ್ಮೂಲಗಳನ್ನು ಕಸಿದುಕೊಂಡಿದೆ. ಇದು ಹೀಗೇ ಮುಂದುವರೆದರೆ ಜಿಲ್ಲೆಯ ಬೆಳವಣಿಗೆಗೆ ಇರುವ ಏಕೈಕ ಸಂಪತ್ತಾಗಿರುವ ಯುವ ಜನರನ್ನೂ ನಾವು ಕಳೆದುಕೊಳ್ಳಲಿದ್ದೇವೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ABOUT THE AUTHOR

...view details