ಕಲಬುರಗಿ:ರೈತ ಕೃಷಿ ಕಾಯ್ದೆಗಳನ್ನು ವಿರೋಧಿ ಕರೆ ನೀಡಿರುವ ಭಾರತ ಬಂದ್ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸಂಯುಕ್ತ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಈ ವೇಳೆ ಪೊಲೀಸರು 30 ಕ್ಕೂ ಹೆಚ್ಚು ಜನ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಗರದ ಕೇಂದ್ರ ಬಸ್ ನಿಲ್ದಾಣದ ಮುಂದೆ ಬೆಳಗ್ಗೆಯಿಂದಲೇ ವಿವಿಧ ಸಂಘಟನೆಗಳ ಕಾರ್ಯಕರ್ತರು ಬಂದ್ ಮಾಡುತ್ತಿದ್ದು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸದ್ಯ ಬಸ್, ಆಟೋ ಸಂಚಾರ ಆರಂಭವಾಗಿದ್ದು, ವ್ಯಾಪಾರ ವಹಿವಾಟು ಸಹ ಎಂದಿನಂತಿದೆ.