ಕಲಬುರಗಿ: ಅಫಜಲಪುರ ಆಸ್ಪತ್ರೆಯಲ್ಲಿ ನಡೆದಿರುವ ನಾಲ್ಕು ಜನರ ಸಾವು ಆಕ್ಸಿಜನ್ ಕೊರತೆಯಿಂದಲ್ಲ ಎಂದು ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಸ್ಪಷ್ಟೀಕರಣ ನೀಡಿದ್ದಾರೆ.
ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ಆಕ್ಸಿಜನ್ ಕೊರತೆಯಿಂದ ಕಲಬುರಗಿ ಜಿಲ್ಲೆಯಲ್ಲಿ ಇದುವರೆಗೆ ಒಂದೂ ಸಾವು ಸಂಭವಿಸಿಲ್ಲ. ಅಫಜಲಪುರ ತಾಲೂಕು ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಆಗಿಯೇ ಇಲ್ಲ. ಈ ಕುರಿತು ಮಾಧ್ಯಮಗಳಿಗೆ ತಾಲೂಕು ವೈದ್ಯಾಧಿಕಾರಿ ತಪ್ಪು ಮಾಹಿತಿ ನೀಡಿದ್ರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.