ಕಲಬುರಗಿ:ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ಜಿಲ್ಲಾನ್ಯಾಯಾಲಯ ತೀರ್ಪು ನೀಡಿದೆ.
ಹೈದ್ರಾಬಾದ್ ಮೂಲದ ರಾಮಚಂದ್ರ ಗೊಂದಳಿ ಶಿಕ್ಷೆಗೆ ಗುರಿಯಾದ ಅಪರಾಧಿ. ಆರೋಪಿ ಅಪ್ರಾಪ್ತೆಯನ್ನು ಅಪಹರಿಸಿಕೊಂಡು ಹೋಗಿ ಔರಾದ್ ಗ್ರಾಮದ ಬಳಿ ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ್ದ.
2018ರಲ್ಲಿ ಘಟನೆ ನಡೆದಿದ್ದು, ಶಾಹಬಜಾರ್ ಮಹಿಳಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಆರೋಪಿ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ವಾದ-ಪ್ರತಿವಾದ ಆಲಿಸಿದ ಅಪರ ಜಿಲ್ಲಾ ಮತ್ತು ಸತ್ರ ವಿಶೇಷ ನ್ಯಾಯಲಯದ ನ್ಯಾಯಧೀಶ ಎಸ್.ಗೋಪಾಲಪ್ಪ ಆರೋಪಿಗೆ ಜೀವಾವಧಿ ಶಿಕ್ಷೆ 1 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ. ಹಾಗೆ ಕಾನೂನು ನೆರವು ಸಮಿತಿಯಿಂದ ಸಂತ್ರಸ್ತ ಬಾಲಕಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡಲು ನ್ಯಾಯಾಧೀಶರು ಸೂಚಿಸಿದ್ದಾರೆ.