ಕಲಬುರಗಿ:ತೋಟಗಾರಿಕೆ ಇಲಾಖೆ ಆವರಣದಲ್ಲಿ ಆಯೋಜಿಸಿರುವ ಸಸ್ಯ ಸಂತೆ ಹಾಗೂ ತೋಟಗಾರಿಕೆ ಅಭಿಯಾನವನ್ನು ಅಕ್ಟೋಬರ್ 6ರ ವರೆಗೆ ವಿಸ್ತರಿಸಿರುವುದಾಗಿ ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಶ್ರೀಶೈಲ್ ದಿಡ್ಡಿಮನಿ ತಿಳಿಸಿದ್ದಾರೆ.
ಕಲಬುರಗಿ ತೋಟಗಾರಿಕಾ ಅಭಿಯಾನ ಅಕ್ಟೋಬರ್ 6ರವರಗೆ ವಿಸ್ತರಣೆ - Department of Horticulture
ಕಲಬುರಗಿ ತೋಟಗಾರಿಕಾ ಇಲಾಖೆ ವತಿಯಿಂದ ಹಮ್ಮಿಕೊಂಡಿರುವ ಸಸ್ಯೆ ಸಂತೆ ಮತ್ತು ತೋಟಗಾರಿಕಾ ಅಭಿಯಾನವನ್ನು ವಿಸ್ತರಿಸಲಾಗಿದೆ. ಸಾರ್ವಜನಿಕರ ಉತ್ತಮ ಪ್ರತಿಕ್ರಿಯೆ ಮತ್ತು ಗಾಂಧಿ ಜಯಂತಿ ಅಂಗವಾಗಿ ಅಭಿಯಾನವನ್ನು ಆಕ್ಟೋಬರ್ 6ರವರೆಗೆ ವಿಸ್ತರಿಸಲಾಗಿದೆ.
ತೋಟಗಾರಿಕೆ ಇಲಾಖೆಯಿಂದ ಲಭ್ಯವಿರುವ ಯೋಜನೆಗಳ ಬಗ್ಗೆ ಮಾಹಿತಿ ನೀಡಲು, ಮತ್ತು ರಿಯಾಯಿತಿ ದರದಲ್ಲಿ ಹಣ್ಣು, ಹೂ ಹಾಗೂ ಔಷಧೀಯ ಸಸ್ಯಗಳನ್ನು ರೈತರಿಗೆ ಹಾಗೂ ಸಾರ್ವಜನಿಕರಿಗೆ ನೀಡುವ ಉದ್ದೇಶದಿಂದ ಸಸ್ಯ ಸಂತೆ ಅಭಿಯಾನವನ್ನು ಆಗಸ್ಟ್ 20 ರಿಂದ 26ರ ವರೆಗೆ ಆಯೋಜಿಸಲಾಗಿತ್ತು.
ತೋಟಗಾರಿಕೆ ಇಲಾಖೆಯ ಅಭಿಯಾನಕ್ಕೆ ಸಾರ್ವಜನಿಕರು ಹಾಗೂ ರೈತರಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿರುವುದರಿಂದ ಹಾಗೂ ಗಾಂಧಿ ಜಯಂತಿ ಅಂಗವಾಗಿ, ಅಭಿಯಾನವನ್ನು ಅಕ್ಟೋಬರ್ 6ರ ವರೆಗೆ ವಿಸ್ತರಿಸಲಾಗಿದೆ. ಆದ್ದರಿಂದ ರೈತರು ಹಾಗೂ ನಗರ ನಿವಾಸಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಇಲಾಖೆಯ ಅಧಿಕಾರಿಗಳು ಮನವಿ ಮಾಡಿದ್ದಾರೆ.