ಚಿಂಚೋಳಿ: ಚಾಕೊಲೇಟ್ ತರಲು ಅಂಗಡಿಗೆ ಹೋಗಿದ್ದ ಅಪ್ರಾಪ್ತ ಬಾಲಕಿ ಮೇಲೆ 16 ವರ್ಷದ ಅಪ್ರಾಪ್ತ ಬಾಲಕ ಅತ್ಯಾಚಾರ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಕಲಬುರಗಿ ಜಿಲ್ಲೆಯ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂತಹದ್ದೊಂದು ಘಟನೆ ವರದಿಯಾಗಿದೆ. ಮನೆಯಲ್ಲಿ ಕೊಟ್ಟಿದ್ದ ಹಣ ತೆಗೆದುಕೊಂಡು ಚಾಕೊಲೇಟ್ ತರಲೇಂದು ಪಕ್ಕದ ಅಂಗಡಿಗೆ ತೆರಳಿದ್ದ 4 ವರ್ಷದ ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ಒಳಗೆ ಎಳೆದುಕೊಂಡು ಹೋಗಿ 16 ವರ್ಷದ ಅಪ್ರಾಪ್ತ ಆರೋಪಿ ಅತ್ಯಾಚಾರ ಮಾಡಿದ್ದಾನೆಂದು ಆರೋಪಿಸಲಾಗಿದೆ.