ಕಲಬುರಗಿ: ಚಲಿಸುತ್ತಿದ್ದ ರೈಲಿನಿಂದ ಆಯತಪ್ಪಿ ಬಿದ್ದ ಪ್ರಯಾಣಿಕನ್ನು ರೈಲ್ವೆ ಪೊಲೀಸ್ ಸಿಬ್ಬಂದಿ ರಕ್ಷಿಸಿದ್ದಾರೆ. ಘಟನೆ ವಿಡಿಯೋ ರೈಲ್ವೆ ನಿಲ್ದಾಣದ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಚಲಿಸುತ್ತಿದ್ದ ರೈಲಿನಿಂದ ಆಯತಪ್ಪಿ ಬಿದ್ದ ಪ್ರಯಾಣಿಕನನ್ನು ರಕ್ಷಿಸಿದ ಪೊಲೀಸ್ ಸಿಬ್ಬಂದಿ - Passenger who fell down in the train in Kalburgi
ಚಲಿಸುತ್ತಿದ್ದ ರೈಲಿನಿಂದ ಆಯತಪ್ಪಿ ಬಿದ್ದ ಪ್ರಯಾಣಿಕನ್ನು ರೈಲ್ವೆ ಪೊಲೀಸ್ ಸಿಬ್ಬಂದಿ ಪ್ರವೀಣ್ ರಕ್ಷಿಸಿದ್ದಾರೆ.
ರೈಲಿನಿಂದ ಆಯತಪ್ಪಿ ಬಿದ್ದ ಪ್ರಯಾಣಿಕನನ್ನು ರಕ್ಷಿಸಿದ ಪೊಲೀಸ್ ಸಿಬ್ಬಂದಿ
ಕಳೆದ ರಾತ್ರಿ ಕಲಬುರಗಿ ರೈಲ್ವೆ ನಿಲ್ಧಾಣದಲ್ಲಿ ಹಾಸನ ಸೊಲ್ಲಾಪರ ರೈಲು ಚಲಿಸಲು ಆರಂಭವಾಗುತ್ತಿತ್ತು. ಈ ವೇಳೆ, ಅವಸರದಲ್ಲಿ ರೈಲು ಹತ್ತಲು ಹೋದ ಪ್ರಯಾಣಿಕ ಆಯಾತಪ್ಪಿ ರೈಲಿನಡಿ ಬಿದ್ದಿದ್ದರು. ಕೂಡಲೇ ಅಲ್ಲಿದ್ದ ರೈಲ್ವೆ ಪೊಲೀಸ್ ಸಿಬ್ಬಂದಿ ಪ್ರವೀಣ್ ಆತನನ್ನು ರಕ್ಷಿಸಿದ್ದಾರೆ. ಪೊಲೀಸ್ ಸಿಬ್ಬಂದಿ ಪ್ರವೀಣ್ ಮಾನವೀಯ ಕಾರ್ಯ ಹಾಗೂ ಧೈರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಇದನ್ನೂ ಓದಿ: ಶಿವಮೊಗ್ಗದಲ್ಲಿ ನಾಳೆ ಕರ್ಪ್ಯೂ ಸಡಿಲಿಕೆ: ಶಾಲಾ - ಕಾಲೇಜು ರಜೆ ವಿಸ್ತರಣೆ