ಕರ್ನಾಟಕ

karnataka

ETV Bharat / state

ಕಲಬುರಗಿ:  ರಾಜ್ಯದಲ್ಲೂ ಪರೀಕ್ಷೆ ರದ್ದುಪಡಿಸುವಂತೆ ವಿದ್ಯಾರ್ಥಿಗಳ ಒತ್ತಾಯ

ಕೇಂದ್ರ ಸರ್ಕಾರ ಸಿಬಿಎಸ್ಇ ಪರೀಕ್ಷೆ ರದ್ದುಪಡಿಸಿದಂತೆ ರಾಜ್ಯ ಸರ್ಕಾರ ಕೂಡಾ ಪರೀಕ್ಷೆ ರದ್ದು ಮಾಡಲಿ ಎಂದು ಕಲಬುರಗಿ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

Kalburgi
ಪರೀಕ್ಷೆ ರದ್ದತಿಗೆ ವಿದ್ಯಾರ್ಥಿಗಳ ಒತ್ತಾಯ

By

Published : Jun 4, 2021, 8:35 AM IST

Updated : Jun 4, 2021, 1:03 PM IST

ಕಲಬುರಗಿ: ಎಸ್ಎಸ್ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಬೇಕೇ? ಅಥವಾ ಬೇಡವೇ? ಎಂಬ ಬಗ್ಗೆ ರಾಜ್ಯ ಸರ್ಕಾರ ಗೊಂದಲದಲ್ಲಿರುವಾಗಲೇ ಕಲಬುರಗಿ ಜಿಲ್ಲೆಯ ಅನೇಕ ವಿದ್ಯಾರ್ಥಿಗಳು ಪರೀಕ್ಷೆ ನಡೆಸುವುದು ಬೇಡ ಎಂದು ಮನವಿ ಮಾಡಿದ್ದಾರೆ.

ಪರೀಕ್ಷೆ ರದ್ದತಿಗೆ ವಿದ್ಯಾರ್ಥಿಗಳ ಒತ್ತಾಯ

ಕೇಂದ್ರ ಸರ್ಕಾರ ಈಗಾಗಲೇ ಸಿಬಿಎಸ್ಇ ಪರೀಕ್ಷೆ ರದ್ದು ಮಾಡಿದ್ದು, ವಿದ್ಯಾರ್ಥಿಗಳು ಸಂಪೂರ್ಣ ಸಮಯವನ್ನು ನೀಟ್, ಜೆಇಇ ಪರೀಕ್ಷೆ ಸಿದ್ದತೆಗೆ ಬಳಸಿಕೊಂಡಿದ್ದಾರೆ. ಆದರೆ ರಾಜ್ಯ ಸರ್ಕಾರ ಪರೀಕ್ಷೆ ನಡೆಸಿದ್ರೆ ನಮಗೆ ನೀಟ್, ಜೆಇಇ ಹಾಗು ಸಿಇಟಿ ಪರೀಕ್ಷೆಗೆ ಹೆಚ್ಚಿನ ಒತ್ತು ನೀಡಲು ಸಮಯಾವಕಾಶ ಸಿಗುವುದಿಲ್ಲ ಎನ್ನುತ್ತಿದ್ದಾರೆ.

ಇದೇ ವೇಳೆ, ನೆಟ್‌ವರ್ಕ್ ಸಮಸ್ಯೆ, ಸ್ಮಾರ್ಟ್ ಫೋನ್ ತೆಗೆದುಕೊಳ್ಳಲಾಗದ ಅನೇಕ ವಿದ್ಯಾರ್ಥಿಗಳು ಆನ್‌ಲೈನ್ ಕ್ಲಾಸ್​​ನಿಂದ ವಂಚಿತರಾಗಿದ್ದಾರೆ. ಹೀಗಿರುವಾಗ ಪರೀಕ್ಷೆ ನಡೆಸಿದರೆ ವಿದ್ಯಾರ್ಥಿಗಳಿಗೆ ಹಿನ್ನೆಡೆಯಾಗಲಿದೆ. ಹೀಗಾಗಿ, ಸಿಬಿಎಸ್ಇಯಂತೆ ರಾಜ್ಯ ಸರ್ಕಾರ ಕೂಡಾ ಪರೀಕ್ಷೆ ರದ್ದುಪಡಿಸಲಿ ಎಂದು ಹಲವು ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿ ಪರ ಸಂಘಟನೆಯ ಮುಖ್ಯಸ್ಥರು ಒತ್ತಾಯಿಸಿದ್ದಾರೆ.

Last Updated : Jun 4, 2021, 1:03 PM IST

ABOUT THE AUTHOR

...view details