ಕಲಬುರಗಿ:ಸಾಧಿಸುವ ಛಲ ಹೊಂದಿದ್ದರೆ ಯಾರು ಬೇಕಾದ್ರು ಸಾಧನೆ ಮಾಡಬಹುದು ಎಂಬುವುದಕ್ಕೆ ಜಿಲ್ಲೆಯ ಇಬ್ಬರು ಯುವತಿಯರು ಸಾಕ್ಷಿಯಾಗಿದ್ದಾರೆ.
ಇತ್ತೀಚೆಗೆ ಪ್ರಕಟಗೊಂಡ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ಹುದ್ದೆಗಳ ನೇಮಕಾತಿಯಲ್ಲಿ ಜಿಲ್ಲೆಯ ಆಳಂದ ತಾಲೂಕಿನ ಯಳಸಂಗಿ ಗ್ರಾಮದ ರೇವತಿ ಎಸ್. ಪಾಟೀಲ್ ಹಾಗೂ ಸಂಧ್ಯಾರಾಣಿ ಎಚ್. ಕುರನಳ್ಳಿ ಆಯ್ಕೆಯಾಗಿದ್ದಾರೆ.
ಕಲ್ಯಾಣ ಕರ್ನಾಟಕ ವೃಂದದ 25 ಹುದ್ದೆಗಳ ನೇಮಕಾತಿಯಲ್ಲಿ ರೇವತಿ 14ನೇ ರ‍್ಯಾಂಕ್ ಹಾಗೂ ಸಂಧ್ಯಾರಾಣಿ 25ನೇ ರ‍್ಯಾಂಕ್ ಪಡೆದಿದ್ದಾರೆ. ರೇವತಿ ಸದ್ಯ ಸಿಂದಗಿ ತಾಲೂಕಿನ ಕಲಕೇರಿ ಪೊಲೀಸ್ ಠಾಣೆಯಲ್ಲಿ ಕಳೆದ ವರ್ಷದಿಂದ ಕಾನ್ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.