ಕಲಬುರಗಿ: ಯಾವುದೇ ಸರ್ಕಾರ ಅಸ್ತಿತ್ವಕ್ಕೆ ಬಂದರೂ ಕಲ್ಯಾಣ ಕರ್ನಾಟಕ ಭಾಗವನ್ನು ಪದೇ ಪದೇ ನಿರ್ಲಕ್ಷಿಸಲಾಗುತ್ತಿದೆ ಎಂದು ಆರೋಪಿಸಿ ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಮುಂದಾದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಧ್ವಜಾರೋಹಣಕ್ಕೆ ಯತ್ನ: ಕಲಬುರಗಿಯಲ್ಲಿ ಹಲವರ ಬಂಧನ - ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಸದಸ್ಯರ ಬಂಧನ
ರಾಜ್ಯೋತ್ಸವ ದಿನದಂದೇ ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರತ್ಯೇಕತೆ ಕೂಗು ಕೇಳಿಬಂದಿದೆ. ಇಂದು ರಾಜ್ಯೋತ್ಸವ ಕಾರ್ಯಕ್ರಮವನ್ನು ಬಹಿಷ್ಕರಿಸಿ, ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ, ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಸದಸ್ಯರು ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನಿಸಿದ್ದಾರೆ. ಈ ವೇಳೆ ಹತ್ತಕ್ಕೂ ಹೆಚ್ಚು ಸದಸ್ಯರನ್ನು ಪೊಲೀಸರು ಬಂಧಿಸಿದ್ದಾರೆ.
![ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಧ್ವಜಾರೋಹಣಕ್ಕೆ ಯತ್ನ: ಕಲಬುರಗಿಯಲ್ಲಿ ಹಲವರ ಬಂಧನ Kalyan Karnataka Separate State Committee protest in Kalaburagi](https://etvbharatimages.akamaized.net/etvbharat/prod-images/768-512-9386904-188-9386904-1604201212505.jpg)
ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ರಾಜ್ಯೋತ್ಸವ ಕಾರ್ಯಕ್ರಮವನ್ನು ಬಹಿಷ್ಕರಿಸಿ, ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ, ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯಿಂದ ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನಿಸಲಾಯಿತು. ಈ ವೇಳೆ ಹತ್ತಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಪದೇ ಪದೇ ಈ ಭಾಗಕ್ಕೆ ಅನ್ಯಾಯವಾಗುತ್ತಿದೆ, ಕಲ್ಯಾಣ ಕರ್ನಾಟಕ ಭಾಗಕ್ಕೆ ರಾಜ್ಯ ಸರ್ಕಾರದಿಂದ ಮಲತಾಯಿ ಧೋರಣೆ ಮುಂದುವರಿಸಲಾಗುತ್ತಿದೆ. ಸಚಿವ ಸ್ಥಾನದಿಂದಲೂ ಈ ಭಾಗವನ್ನ ವಂಚಿಸಲಾಗಿದೆ. ಸಂವಿಧಾನದ ಕಲಂ 371ಕ್ಕೆ ತಿದ್ದುಪಡಿ ತಂದರು ಪ್ರಯೋಜನವಿಲ್ಲ. ಅನ್ಯಾಯದ ಮೇಲೆ ಅನ್ಯಾಯ ಮಾಡಲಾಗುತ್ತಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತ್ಯೇಕ ರಾಜ್ಯಕ್ಕೆ ಒತ್ತಾಯಿಸಿ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೂ ಸ್ಪರ್ಧೆಸೋದಾಗಿ ಮುಖಂಡ ಎಂ.ಎಸ್. ಪಾಟೀಲ್ ತಿಳಿಸಿದ್ದಾರೆ.