ಕಲಬುರಗಿ:ಹೈದರಾಬಾದ್ ಕರ್ನಾಟಕವನ್ನು ಕಲ್ಯಾಣ ಕರ್ನಾಟಕವನ್ನಾಗಿ ಮರು ನಾಮಕರಣ ಮಾಡಿದ ಬಳಿಕ ಇದೇ ಮೊದಲ ಬಾರಿಗೆ ಸೆಪ್ಟೆಂಬರ್ 17ರಂದು ಕಲ್ಯಾಣ ಕರ್ನಾಟಕ ಉತ್ಸವವನ್ನು ಆಚರಿಸಲಾಗುತ್ತಿದೆ. ಕೋವಿಡ್-19 ಹಿನ್ನೆಲೆ ಮುಂಜಾಗ್ರತಾ ಕ್ರಮಗಳನ್ನು ವಹಿಸಿ ಸಂಭ್ರಮವನ್ನು ಆಚರಿಸಬೇಕೆಂದು ಜಿಲ್ಲಾಧಿಕಾರಿ ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ ಸೂಚಿಸಿದ್ದಾರೆ.
ಸೆ.17ರಂದು ಕಲ್ಯಾಣ ಕರ್ನಾಟಕ ಉತ್ಸವ... ಸರಳ ಆಚರಣೆಗೆ ಡಿಸಿ ಸೂಚನೆ
ಸೆಪ್ಟೆಂಬರ್ 17ರಂದು ಕಲ್ಯಾಣ ಕರ್ನಾಟಕ ಉತ್ಸವವನ್ನು ಆಚರಿಸಲಾಗುತ್ತಿದ್ದು, ಕೋವಿಡ್-19 ಹಿನ್ನೆಲೆ ಮುಂಜಾಗ್ರತಾ ಕ್ರಮಗಳನ್ನು ವಹಿಸಿ ಆಚರಿಸಬೇಕೆಂದು ಜಿಲ್ಲಾಧಿಕಾರಿ ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ ಸೂಚಿಸಿದ್ದಾರೆ.
ಈ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಡಿಸಿ, ಕಲ್ಯಾಣ ಕರ್ನಾಟಕ ಉತ್ಸವವನ್ನು ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಆಯೋಜಿಸಲಾಗುವುದು. ಕೊವಿಡ್ ಹಿನ್ನೆಲೆ ಸಮಾರಂಭವನ್ನು ಅತ್ಯಂತ ಸರಳವಾಗಿ ಆಚರಿಸಬೇಕು, ಕಾರ್ಯಕ್ರಮಕ್ಕೆ ಹೆಚ್ಚು ಜನರನ್ನು ಸೇರಿಸಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಕಾರ್ಯಕ್ರಮದ ನೇರಪ್ರಸಾರ:ಕೊರೊನಾ ಭೀತಿ ಹಿನ್ನೆಲೆ ಕಾರ್ಯಕ್ರಮದಲ್ಲಿ ಹೆಚ್ಚು ಜನರನ್ನು ಸೇರಿಸಬಾರದೆಂಬ ನಿರ್ದೇಶನ ಇರುವ ಕಾರಣ ಹಾಗೂ ಕಾರ್ಯಕ್ರಮ ವೀಕ್ಷಿಸುವ ಸೌಭಾಗ್ಯ ಎಲ್ಲರಿಗೂ ದೊರಕುವಂತಾಬೇಕು ಎಂಬ ನಿಟ್ಟಿನಲ್ಲಿ ಫೇಸ್‍ಬುಕ್, ಯೂ ಟ್ಯೂಬ್ ಹಾಗೂ ಟಿವಿ ಚಾನಲ್‍ಗಳಲ್ಲಿ ನೇರಪ್ರಸಾರ ಮಾಡುವಂತೆ ತಿಳಿಸಿದರು.