ಕಲಬುರಗಿ:ರಾಜ್ಯದಲ್ಲಿ ಯಾವುದೇ ಸರ್ಕಾರ ಅಸ್ತಿತ್ವಕ್ಕೆ ಬಂದರೂ ಕಲ್ಯಾಣ ಕರ್ನಾಟಕ ಭಾಗವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗುತ್ತಿದೆ ಎಂದು ಆರೋಪಿಸಿರುವಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿನವೆಂಬರ್ 1ರಂದು ಪ್ರತ್ಯೇಕ ಧ್ವಜಾರೋಹಣ ನೆರವೇರಿಸುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ರವಾನಿಸಿದೆ.
ಕಲ್ಯಾಣ ಕರ್ನಾಟಕ ನಿರ್ಲಕ್ಷ್ಯ ಆರೋಪ: ಪ್ರತ್ಯೇಕ ಧ್ವಜಾರೋಹಣದ ಎಚ್ಚರಿಕೆ - ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ
ಯಾವುದೇ ಸರ್ಕಾರ ಅಸ್ತಿತ್ವಕ್ಕೆ ಬಂದರೂ ಕಲ್ಯಾಣ ಕರ್ನಾಟಕ ಭಾಗವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗುತ್ತಿದೆ ಎಂಬ ಆರೋಪವಿದೆ. ಈ ನಿಟ್ಟಿನಲ್ಲಿ ನವೆಂಬರ್ 1ರಂದು ಪ್ರತ್ಯೇಕ ಧ್ವಜಾರೋಹಣ ನೆರವೇರಿಸುವುದಾಗಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಎಚ್ಚರಿಕೆ ನೀಡಿದೆ.
ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಎಂ.ಎಸ್. ಪಾಟೀಲ್ ನರಿಬೋಳ, ರಾಜ್ಯದಲ್ಲಿ ಯಾವುದೇ ಸರ್ಕಾರ ಅಸ್ತಿತ್ವಕ್ಕೆ ಬಂದರೂ ಕಲ್ಯಾಣ ಕರ್ನಾಟಕ ಭಾಗವನ್ನು ಸಂಪೂರ್ಣ ನಿರ್ಲಕ್ಷಿಸಲಾಗುತ್ತಿದೆ. ಸಿಎಂ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸಹ ಕಲ್ಯಾಣ ಕರ್ನಾಟಕ ಭಾಗಕ್ಕೆ ಕೇವಲ ಒಂದು ಸಚಿವ ಸ್ಥಾನ ನೀಡುವ ಮೂಲಕ ಮಲತಾಯಿ ಧೋರಣೆ ಅನುಸರಿಸಲಾಗಿದೆ. ಇದೀಗ ಮತ್ತೆ ಮುಂಬೈ ಕರ್ನಾಟಕದವರಾದ ಗೋವಿಂದ ಕಾರಜೋಳ ಅವರನ್ನು ಕೆಕೆಆರ್ಡಿಬಿ ಅಧ್ಯಕ್ಷರಾನ್ನಾಗಿ ಮಾಡಲು ಮುಂದಾಗಿರುವುದು ಖಂಡನಾರ್ಹವಾಗಿದೆ. ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನಕ್ಕೆ ಕಲ್ಯಾಣ ಕರ್ನಾಟಕ ಭಾಗದವರನ್ನೇ ನೇಮಕ ಮಾಡಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡಲಿದ್ದೇವೆ ಎಂದು ಎಚ್ಚರಿಕೆ ನೀಡಿದರು.
ಅಷ್ಟೇ ಅಲ್ಲದೇ, ನವೆಂಬರ್ 1ರಂದು ಕರ್ನಾಟಕ ರಾಜ್ಯೋತ್ಸವ ದಿನದಂದೇ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಒತ್ತಾಯಿಸಿ ಪ್ರತ್ಯೇಕ ಧ್ವಜಾರೋಹಣ ನೆರವೇರಿಸುವುದಾಗಿ ಎಂ.ಎಸ್. ಪಾಟೀಲ್ ತಿಳಿಸಿದರು.