ಕಲಬುರಗಿ:ಫೆಬ್ರವರಿ ತಿಂಗಳಿನಲ್ಲಿ ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಶಾಸಕರು ಒಂದು ತಿಂಗಳ ಸಂಬಳ ನೀಡುದಾಗಿ ಒಪ್ಪಿಕೊಂಡಿರುವುದಾಗಿ ಕಸಾಪ ಜಿಲ್ಲಾಧ್ಯಕ್ಷ ವೀರಭದ್ರ ಸಿಂಪಿ ತಿಳಿಸಿದ್ದಾರೆ.
ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕಲಬುರಗಿ ಜಿಲ್ಲೆಯ ಶಾಸಕರಿಂದ 1 ತಿಂಗಳ ವೇತನ - ವೀರಭದ್ರ ಸಿಂಪಿ ಹೇಳಿಕೆ
ಫೆಬ್ರವರಿ ತಿಂಗಳಿನಲ್ಲಿ ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಶಾಸಕರು ಒಂದು ತಿಂಗಳ ಸಂಬಳ ನೀಡುದಾಗಿ ಒಪ್ಪಿಕೊಂಡಿರುವುದಾಗಿ ಕಸಾಪ ಜಿಲ್ಲಾಧ್ಯಕ್ಷ ವೀರಭದ್ರ ಸಿಂಪಿ ತಿಳಿಸಿದ್ದಾರೆ.
ಗುಲ್ಬರ್ಗಾ ವಿವಿ ಆವರಣದಲ್ಲಿ ಫೆ. 5, 6 ಮತ್ತು 7ರಂದು ಮೂರು ದಿನಗಳ ಕಾಲ ನಡೆಯಲಿರುವ ಸಮ್ಮೇಳನಕ್ಕೆ ಜಿಲ್ಲೆಯ ಶಾಸಕರು ತಮ್ಮ ಒಂದು ತಿಂಗಳ ವೇತನ ನೀಡಲು ಮುಂದಾಗಿರುವುದಾಗಿ ಕಸಾಪ ಅಧ್ಯಕ್ಷ ಸಿಂಪಿ ಸಮ್ಮೇಳನದ ಮುಖ್ಯ ವೇದಿಕೆ ಗುದ್ದಲಿ ಪೂಜೆ ಬಳಿಕ ಘೋಷಿಸಿದರು. ಈಗಾಗಲೇ ಜಿಲ್ಲಾಧಿಕಾರಿ ಬಿ.ಶರತ್ ತಮ್ಮ ಒಂದು ತಿಂಗಳ ವೇತನವನ್ನು ಸಮ್ಮೇಳನಕ್ಕೆ ನೀಡಿದ್ದು, ವಿವೇಕಾನಂದ ವಿದ್ಯಾನಿಕೇತನ ಶಾಲೆಯವರು 51 ಸಾವಿರ ರೂ. ದೇಣಿಗೆ ನೀಡಿದ್ದಾರೆ. ಅಲ್ಲದೆ ಅನೇಕರು ಸಹಾಯಕ್ಕೆ ಮುಂದಾಗಿದ್ದು, ಹೆಚ್ಚಿನ ದೇಣಿಗೆ ಸಂಗ್ರಹವಾಗುವ ನೀರಿಕ್ಷೆ ಇದೆ ಎಂದು ಜಿಲ್ಲಾಧಿಕಾರಿ ಶರತ್ ತಿಳಿಸಿದ್ದಾರೆ.
ಈ ವೇಳೆ ಶಾಸಕರಾದ ದತ್ತಾತ್ರೇಯ ಪಾಟೀಲ್ ರೇವೂರ್, ಬಸವರಾಜ್ ಮತ್ತಿಮೂಡ್, ಖನೀಖ್ ಫಾತೀಮಾ ಬೇಗಂ, ಅವಿನಾಶ್ ಜಾಧವ್, ಬಿ.ಜಿ.ಪಾಟೀಲ್, ತಿಪ್ಪಣಪ್ಪ ಕಮಕನೂರ್ ಉಪಸ್ಥಿತರಿದ್ದರು.