ಕಲಬುರಗಿ:ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ತವರು ಕ್ಷೇತ್ರ ಕಲಬುರಗಿಗೆ ಇದೇ ಮೊದಲ ಬಾರಿಗೆ ಭೇಟಿ ನೀಡುತ್ತಿದ್ದಾರೆ. ಕಲಬುರಗಿಗೆ ಬಂದ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಅದ್ದೂರಿ ಸ್ವಾಗತ ಕೋರಲಿದ್ದಾರೆ.
ಇಂದು ನಗರಕ್ಕೆ ಆಗಮಿಸುವ ಅವರಿಗೆ ಅದ್ಧೂರಿ ಸ್ವಾಗತ ನೀಡಲು ಕಾಂಗ್ರೆಸ್ ಮತ್ತು ದಲಿತ ಸಂಘಟನೆಗಳು ಭರದ ಸಿದ್ಧತೆ ನಡೆಸಿವೆ. 'ಕಲ್ಯಾಣ ಕ್ರಾಂತಿ' ಹೆಸರಿನಲ್ಲಿ ಹಳೆಯ ಪಕ್ಷವು ಮಹಾ ಸಮಾವೇಶವನ್ನು ಆಯೋಜಿಸುತ್ತಿದ್ದು, ಇದರಲ್ಲಿ ಏಳು ಜಿಲ್ಲೆಗಳು ಮತ್ತು 41 ವಿಧಾನಸಭಾ ಕ್ಷೇತ್ರಗಳ ಜನರು ಭಾಗವಹಿಸಲಿದ್ದಾರೆ.
ನವದೆಹಲಿಯಿಂದ ವಿಶೇಷ ವಿಮಾನದ ಮೂಲಕ ಕಲಬುರಗಿಗೆ ಆಗಮಿಸಿದ ನಂತರ ಖರ್ಗೆ ಅವರನ್ನು ನಾಲ್ಕು ಕಿಲೋಮೀಟರ್‌ವರೆಗೆ ಮೆರವಣಿಗೆಯಲ್ಲಿ ಕರೆದೊಯ್ಯಲಾಗುತ್ತದೆ. ನಂತರ ಎನ್.ವಿ.ಕಾಲೇಜು ಮೈದಾನದಲ್ಲಿ ಆಯೋಜಿಸಲಾಗುತ್ತಿರುವ ಸಮಾವೇಶದಲ್ಲಿ ಪಕ್ಷದ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.
ಇದನ್ನು ಓದಿ:ಬಿಆರ್ಎಸ್ ಪಕ್ಷಕ್ಕೆ ಶುಭ ಹಾರೈಸಿದ ಹೆಚ್ ಡಿ ಕುಮಾರಸ್ವಾಮಿ
ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಮತ್ತು ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಮಾವೇಶದಲ್ಲಿ ಉಪಸ್ಥಿತರಿರುವರು. ಈ ಬೃಹತ್ ಸಮಾವೇಶವನ್ನು ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್‌ನ ರಾಜಕೀಯ ಶಕ್ತಿ ಪ್ರದರ್ಶನ ಎಂದು ರಾಜಕೀಯ ತಜ್ಞರು ಬಣ್ಣಿಸುತ್ತಿದ್ದಾರೆ.
ದಲಿತರ ಐಕಾನ್:ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ವಿರುದ್ಧ ಖರ್ಗೆ ಹೀನಾಯ ಸೋಲು ಕಂಡಿದ್ದರು. ನಂತರ, ಅವರು ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ನಾಮನಿರ್ದೇಶನಗೊಂಡಿದ್ದರು ಮತ್ತು ಎಐಸಿಸಿ ಅಧ್ಯಕ್ಷ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ತುಳಿತಕ್ಕೊಳಗಾದ ವರ್ಗಗಳ ವರಿಷ್ಠ ನಾಯಕ ಖರ್ಗೆ ದಲಿತ ನಾಯಕ ಎಂಬ ಹಣೆಪಟ್ಟಿಯನ್ನು ಇಷ್ಟಪಡುವುದಿಲ್ಲ. ಆದಾಗ್ಯೂ, ರಾಜ್ಯಾದ್ಯಂತ ಶೋಷಿತ ಮತ್ತು ದೀನದಲಿತ ವರ್ಗಗಳು ಅವರನ್ನು ಇನ್ನೂ ತಮ್ಮ ಐಕಾನ್ ಆಗಿ ನೋಡುತ್ತಿದ್ದಾರೆ.
ಸಮಾವೇಶದಲ್ಲಿ, ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ ನಂತರ ಆಡಳಿತಾರೂಢ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರು ಬಿರುಸಿನ ದಾಳಿ ನಡೆಸುವ ಸಾಧ್ಯತೆ ಇದೆ. ರಾಜ್ಯದಲ್ಲಿ ಕಳೆದ ಬಾರಿ ಬಿಜೆಪಿಯ ತೆಕ್ಕೆಗೆ ಸರಿದಿದ್ದ ದಲಿತ ಮತ್ತು ಶೋಷಿತ ವರ್ಗದ ಇತರ ವರ್ಗಗಳ ಮತಗಳನ್ನು ಮರಳಿ ಪಡೆಯುವುದು ಪಕ್ಷಕ್ಕೆ ನಿರ್ಣಾಯಕವಾಗಿದೆ.
ಕಾಂಗ್ರೆಸ್ ನಾಯಕರು ಆಡಳಿತಾರೂಢ ಬಿಜೆಪಿಯ ಆಕ್ರಮಣಕಾರಿ ಹಿಂದುತ್ವದ ಅಜೆಂಡಾವನ್ನು ಮೆಟ್ಟಿ ನಿಲ್ಲಲು ಸಜ್ಜಾಗಿದ್ದಾರೆ . ಎಸ್‌ಸಿ ಮತ್ತು ಎಸ್‌ಟಿಯ ಮೀಸಲಾತಿಯನ್ನು ಹೆಚ್ಚಿಸಿದ ಶ್ರೇಯಸ್ಸನ್ನೂ ಪಕ್ಷ ತನ್ನದೆಂದು ಬಿಂಬಿಸಿಕೊಳ್ಳಲು ತಯಾರಿ ನಡೆಸಿದೆ.
ಇದನ್ನು ಓದಿ:ವಿಧಾನಮಂಡಲ ಅಧಿವೇಶನ: ಸುವರ್ಣಸೌಧದಲ್ಲಿ ಕಚೇರಿ ಕೊಠಡಿ ಹಂಚಿಕೆ ಮಾಡಿ ಆದೇಶ