ಕಲಬುರಗಿ :ಜೆಸ್ಕಾಂ ವ್ಯಾಪ್ತಿಯಲ್ಲಿ ಕಾನೂನು ಬಾಹಿರವಾಗಿ ಟೆಂಡರ್ ನಿಯಮ ತಿದ್ದುಪಡಿ ಮಾಡಿ, ಬಿಜೆಪಿ ಮುಖಂಡರಿಗೆ ವಿದ್ಯುತ್ ಕಂಬಗಳ ಟೆಂಡರ್ ನೀಡಲು ಹುನ್ನಾರ ನಡೆದಿದೆ ಎಂದು ಆರೋಪಿಸಿ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕಾನೂನು ಬಾಹಿರ ಟೆಂಡರ್ ನಿಯಮ ಆರೋಪ.. ಕರ್ನಾಟಕ ಪ್ರಾಂತ ರೈತ ಸಂಘದಿಂದ ಪ್ರತಿಭಟನೆ
ಜೆಸ್ಕಾಂ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಬಿಜೆಪಿ ಸರ್ಕಾರದಿಂದ ಕಾನೂನು ಬಾಹಿರ ಚಟುವಟಿಕೆಗಳಿಗೆ ಕುಮ್ಮಕ್ಕು ಸಿಗುತ್ತಿದೆ. ಜೆಸ್ಕಾಂ ವ್ಯಾಪ್ತಿಯಲ್ಲಿ ಒಂದು ಲಕ್ಷ ವಿದ್ಯುತ್ ಕಂಬ ಪೂರೈಕೆಗೆ ಟೆಂಡರ್ ಪ್ರಕ್ರಿಯೆ ನಡೆಸಲಾಗಿದೆ..
ಜೆಸ್ಕಾಂ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಬಿಜೆಪಿ ಸರ್ಕಾರದಿಂದ ಕಾನೂನು ಬಾಹಿರ ಚಟುವಟಿಕೆಗಳಿಗೆ ಕುಮ್ಮಕ್ಕು ಸಿಗುತ್ತಿದೆ. ಜೆಸ್ಕಾಂ ವ್ಯಾಪ್ತಿಯಲ್ಲಿ ಒಂದು ಲಕ್ಷ ವಿದ್ಯುತ್ ಕಂಬ ಪೂರೈಕೆಗೆ ಟೆಂಡರ್ ಪ್ರಕ್ರಿಯೆ ನಡೆಸಲಾಗಿದೆ. 34.75 ಕೋಟಿ ರೂ. ಟೆಂಡರ್ ಕರೆಯಲಾಗಿದೆ. ಬಿಜೆಪಿ ಮುಖಂಡರಿಗೆ ಟೆಂಡರ್ ನೀಡಲು ನಿಯಮ ತಿದ್ದುಪಡಿ ಮಾಡಲಾಗಿದ್ದು, ಅದೇ ಕಾರಣಕ್ಕೆ ಜೆಸ್ಕಾಂ ಎಂಡಿಯನ್ನೂ ಬದಲಾವಣೆ ಮಾಡಲಾಗಿದೆ.
ವಿದ್ಯುತ್ ಕಂಬ ಖರೀದಿ ಟೆಂಡರ್ನಲ್ಲಿ ಭಾರಿ ಅಕ್ರಮ ನಡೆದಿದ್ದು, ಕೂಡಲೇ ಕಾನೂನು ಬಾಹಿರ ಟೆಂಡರ್ ಪ್ರಕ್ರಿಯೆಯ ತನಿಖೆ ನಡೆಸಬೇಕು. ಅಲ್ಲದೇ, ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಂದು ಆಗ್ರಹಿಸಿದರು.