ಕರ್ನಾಟಕ

karnataka

ಎಐಸಿಸಿ ಅಧ್ಯಕ್ಷರಾಗಿ ಖರ್ಗೆ ಆಯ್ಕೆ: ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ

ಎಐಸಿಸಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾದ ಹಿನ್ನೆಲೆ ಅವರ ಅಭಿಮಾನಿಗಳು ದೆಹಲಿಯ ಖರ್ಗೆ ನಿವಾಸದ ಮುಂದೆ ಸಂಭ್ರಮಾಚರಣೆ ಮಾಡಿದ್ದಾರೆ. ಅಲ್ಲದೇ ಕಲಬುರಗಿ ನಗರದಲ್ಲೂ ಕಾಂಗ್ರೆಸ್​ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.

By

Published : Oct 19, 2022, 3:47 PM IST

Published : Oct 19, 2022, 3:47 PM IST

kharge-elected-as-aicc-president-celebrations-by-congress-workers-in-delhi
ಎಐಸಿಸಿ ಅಧ್ಯಕ್ಷರಾಗಿ ಖರ್ಗೆ ಆಯ್ಕೆ : ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ

ಕಲಬುರಗಿ :ಕಾಂಗ್ರೆಸ್​ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನ ದೊರೆಯುತ್ತಿದ್ದಂತೆ ಅವರ ಅಭಿಮಾನಿಗಳಲ್ಲಿ ಸಂಭ್ರಮ ಕಳೆಗಟ್ಟಿದೆ. ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾದ ಹಿನ್ನೆಲೆ ಕಲಬುರಗಿಯ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ದೆಹಲಿಯಲ್ಲಿ ಸಂಭ್ರಮಾಚರಣೆ ಮಾಡಿದರು.

ದೆಹಲಿಯ ಮಲ್ಲಿಕಾರ್ಜುನ ಖರ್ಗೆ ನಿವಾಸದ ಮುಂದೆ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಭಾವಚಿತ್ರಕ್ಕೆ ಕ್ಷೀರಾಭಿಷೇಕ ಮಾಡಿ ಸಂಭ್ರಮಾಚರಣೆ ಮಾಡಿದರು. ಇನ್ನು ನಗರದ ಸರ್ದಾರ್​ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಖರ್ಗೆ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು.

ಇದನ್ನೂ ಓದಿ :ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಈಗ ಎಐಸಿಸಿ ಅಧ್ಯಕ್ಷ: ಖರ್ಗೆ ರಾಜಕೀಯ ಹೋರಾಟದ ಹಾದಿ

ABOUT THE AUTHOR

...view details