ಕಲಬುರಗಿ:ಸುಲೇಪೇಟದ ಖಟ್ವಾಂಗಶ್ವೇರ ಮಠದ ಶ್ರೀಗಳ ಕಾರು ಅಪಘಾತದಿಂದ ಗಂಭೀರವಾಗಿ ಗಾಯಗೊಂಡಿದ್ದು ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಖಟ್ವಾಂಗೇಶ್ವರ ಮಠದ ಶ್ರೀಗಳ ಕಾರು ಅಪಘಾತ.. - ಖಟ್ವಾಂಗೇಶ್ವರ ಮಠದ ಶ್ರೀ
ಸುಲೇಪೇಟದ ಖಟ್ವಾಂಗೇಶ್ವರ ಮಠದ ಶ್ರೀಗಳ ಅಪಘಾತದಿಂದ ಗಾಯಗೊಂಡಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಮಲಾಪುರ ತಾಲೂಕಿನ ಕರಿಕೋಟಾ ಹತ್ತಿರ ಶ್ರೀಗಳು ಪ್ರಯಾಣಿಸುತ್ತಿದ್ದ ಕಾರು ಲಾರಿಯ ಹಿಂಬದಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಶ್ರೀಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗೆ ಕಲಬುರಗಿಯ ಯುನೈಟೆಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಶ್ರೀಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಯುನೈಟೆಡ್ ಆಸ್ಪತ್ರೆಗೆ ಲೋಕಸಭಾ ಸದಸ್ಯ ಡಾ. ಉಮೇಶ ಜಾಧವ್ ದೌಡಾಯಿಸಿ ಶ್ರೀಗಳ ಯೋಗಕ್ಷೇಮ ವಿಚಾರಿಸಿದ್ದಾರೆ. ಶ್ರೀಗಳು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಸೂಕ್ತ ಚಿಕಿತ್ಸೆಗೆ ಆಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ಸೂಚಿಸಿದ್ದಾರೆ. ಶ್ರೀಗಳ ಆರೋಗ್ಯ ಸ್ಥಿರವಾಗಿದ್ದು, ಭಕ್ತರು ಆತಂಕ ಪಡುವ ಅಗತ್ಯವಿಲ್ಲ. ಎಲ್ಲರೂ ಶ್ರೀಗಳು ಗುಣಮುಖವಾಗಲೆಂದು ದೇವರಲ್ಲಿ ಪ್ರಾರ್ಥಿಸೋಣ ಅಂತಾ ಭಕ್ತರಿಗೆ ಜಾಧವ್ ಸಂದೇಶ ನೀಡಿದ್ದಾರೆ.