ಕಲಬುರಗಿ:ರೈತ ವಿರೋಧಿಯಾಗಿರೋ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆ ವಾಪಸ್ ಪಡೆಯದಿದ್ದಲ್ಲಿ ಸರ್ಕಾರವನ್ನು ಕಿತ್ತೊಗೆಯೋ ಶಕ್ತಿ ನಮಗಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಸಿದ್ದಾರೆ.
ಸುಗ್ರೀವಾಜ್ಞೆ ವಾಪಸ್ ಪಡೆಯದಿದ್ದಲ್ಲಿ ಸರ್ಕಾರ ಕಿತ್ತೊಗೆಯೋ ಶಕ್ತಿ ನಮಗಿದೆ: ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆ - north karnataka flood news
ರಾಜ್ಯ ಸರ್ಕಾರ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆ ವಾಪಸ್ ಪಡೆಯಬೇಕು. ಇಲ್ಲವಾದಲ್ಲಿ ಅದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಅವರು, ಸಂಪುಟ ಸಭೆಯಲ್ಲಿಯೂ ಇಡದೇ, ಅಧಿವೇಶನದಲ್ಲಿಯೂ ಚರ್ಚಿಸದೇ ಏಕಾಏಕಿ ಈ ಕಾಯ್ದೆ ಜಾರಿಗೆ ತರಲಾಗುತ್ತಿದೆ. ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ರೈತ ಸಮುದಾಯಕ್ಕೆ ದೊಡ್ಡ ಕುತ್ತಾಗಿ ಪರಿಣಮಿಸಲಿದೆ. ಕೂಡಲೇ ಭೂಸುಧಾರಣಾ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆ ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಸರ್ಕಾರವನ್ನು ಕಿತ್ತೊಗೆಯುವ ಶಕ್ತಿ ನಮಗಿದೆ ಎಂದು ಕೋಡಿಹಳ್ಳಿ ಎಚ್ಚರಿಕೆ ನೀಡಿದ್ರು.
ಉತ್ತರ ಕರ್ನಾಟಕದಲ್ಲಿ ಪ್ರವಾಹ ಬಂದು ಅಪಾರ ಪ್ರಮಾಣದ ಹಾನಿಯಾಗಿದೆ. ನಿಜವಾದ ಫಲಾನುಭವಿಗಳಿಗೆ ಪರಿಹಾರ ಸಿಗ್ತಿಲ್ಲ. ನಿಜವಾದ ರೈತರಿಗೆ ಬಿಟ್ಟು ಶಾಸಕರ ಹಿಂಬಾಲಕರಿಗೆ ಪರಿಹಾರ ನೀಡಲಾಗುತ್ತಿದೆ. ಈಗಲಾದರೂ ಕಷ್ಟದಲ್ಲಿದ್ದವರಿಗೆ ನೆರವು ನೀಡಬೇಕು ಎಂದು ಕೋಡಿಹಳ್ಳಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.