ಕಲಬುರಗಿ: ಕಿಲ್ಲರ್ ಕೊರೊನಾಗೆ ಜಿಲ್ಲೆಯಲ್ಲಿ ಮತ್ತಿಬ್ಬರು ಬಲಿಯಾಗಿದ್ದಾರೆ. 62 ವರ್ಷದ ವೃದ್ಧ ಹಾಗೂ 65 ವರ್ಷದ ವೃದ್ಧ ಸಾವನ್ನಪ್ಪಿದ್ದಾರೆ.
ಕಲಬುರಗಿ ಜಿಲ್ಲೆಯಲ್ಲಿ 273 ಸೋಂಕಿತ ಪ್ರಕರಣಗಳು ಪತ್ತೆ - ಕಲಬುರಗಿಯಲ್ಲಿ ಕೊರೊನಾ ಪ್ರಕರಣ ಏರಿಕೆ ನ್ಯೂಸ್
ಕಲಬುರಗಿ ಜಿಲ್ಲೆಯಲ್ಲಿ ಇಂದು 273 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಸದ್ಯ ಜಿಲ್ಲೆಯಲ್ಲಿ ಸಕ್ರಿಯ ಕೊರೊನಾ ಪ್ರಕರಣಗಳ ಸಂಖ್ಯೆ 2,664 ಆಗಿದೆ.
3 ಸೋಂಕಿತ ಪ್ರಕರಣಗಳು ಪತ್ತೆ
ಜಿಲ್ಲೆಯಲ್ಲಿ ಮೃತರ ಸಂಖ್ಯೆ 274ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇಂದು 273 ಜನರಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 16,841 ಗೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಇಂದು 119 ಸೋಂಕಿತರು ಗುಣಮುಖರಾಗಿ ತೆರಳಿದ್ದಾರೆ. ಇಲ್ಲಿವರೆಗೆ ಡಿಸ್ಚಾರ್ಜ್ ಆದವರ ಸಂಖ್ಯೆ 13,903ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 2,664 ಸಕ್ರಿಯ ಕೋವಿಡ್ ಪ್ರಕರಣಗಳಿವೆ.