ಕಲಬುರಗಿ: ಪ್ರಧಾನಿ ನರೇಂದ್ರ ಮೋದಿಯವರು ಘೋಷಿಸಿರುವ ಆತ್ಮನಿರ್ಭರ ಆತ್ಮಾಘಾತ ಹಾಗೂ ಆತ್ಮಹತ್ಯೆಗೆ ದಾರಿ ಮಾಡಿಕೊಡುವ ಯೋಜನೆಯಾಗಿದೆ ಎಂದು ಕೆಪಿಸಿಸಿ ಆರೋಗ್ಯ ಹಸ್ತ ಸಮಿತಿ ಅಧ್ಯಕ್ಷ ಧ್ರುವನಾರಾಯಣ ವ್ಯಂಗ್ಯವಾಡಿದ್ದಾರೆ.
ಆತ್ಮನಿರ್ಭರ ಆತ್ಮಹತ್ಯೆಗೆ ದಾರಿ ಮಾಡಿಕೊಡುವ ಯೋಜನೆ: ಧ್ರುವನಾರಾಯಣ ಕಳವಳ - kalburagi news
ಕರ್ನಾಟಕದಲ್ಲಿ 3.68 ಲಕ್ಷ ಕೋಟಿ ಸಾಲ ಮಾಡಲಾಗಿದ್ದು, ಕೇಂದ್ರ ಸರ್ಕಾರ ರಾಜ್ಯಕ್ಕೆ ನೆರವು ನೀಡುವಲ್ಲಿ ಮೀನಾಮೇಷ ಎಣಿಸುತ್ತಿದೆ. ರಾಜ್ಯದ ಪ್ರತಿಯೊಬ್ಬರ ಮೇಲೆ 62,402 ರೂಪಾಯಿ ಸಾಲವಿದೆ ಎಂದು ಕೆಪಿಸಿಸಿ ಆರೋಗ್ಯ ಹಸ್ತ ಸಮಿತಿ ಅಧ್ಯಕ್ಷ ಧ್ರುವನಾರಾಯಣ ಆರೋಪಿಸಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರ ಯಾವುದೇ ಜಾಗೃತಿ ಮೂಡಿಸುತ್ತಿಲ್ಲ. ಜೊತೆಗೆ ಕೊರೊನಾ ನಿಯಂತ್ರಣಕ್ಕೆ ಯಾವುದೇ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳದೇ ನಿರ್ಲಕ್ಷ್ಯ ತೋರುತ್ತಿದೆ. ಆಕ್ಸಿಜನ್, ವೆಂಟಿಲೇಟರ್ ಸಮಸ್ಯೆ ಹೆಚ್ಚುತಲಿದ್ದು, ಇದರ ಜೊತೆಗೆ ಖಾಸಗಿ ಆಸ್ಪತ್ರೆಗಳು ಸುಲಿಗೆಗಿಳಿದಿವೆ. ಕರ್ನಾಟಕದಲ್ಲಿ 3.68 ಲಕ್ಷ ಕೋಟಿ ಸಾಲ ಮಾಡಲಾಗಿದೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ನೆರವು ನೀಡುವಲ್ಲಿ ಮೀನಮೇಷ ಎಣಿಸುತ್ತಿದೆ. ರಾಜ್ಯದ ಪ್ರತಿಯೊಬ್ಬರ ಮೇಲೆ 62,402 ರೂಪಾಯಿ ಸಾಲವಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ಆರೋಗ್ಯ ಹಸ್ತ ಪ್ರಾರಂಭ: ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವೇ ಮುಂದೆ ಬಂದು ಕರ್ನಾಟಕದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಆರೋಗ್ಯ ಹಸ್ತ ಪ್ರಾರಂಭಿಸಿದೆ. ದೇಶದ ಹಲವೆಡೆ ಕೊರೊನಾ ನಿಯಂತ್ರಣಕ್ಕೆ ಪ್ರಯತ್ನಿಸಲಾಗುತ್ತಿದೆ. ಸೋಂಕಿತರ ಸಂಖ್ಯೆ ನಿಯಂತ್ರಣಕ್ಕೆ ತರಲೆಂದು ಆರೋಗ್ಯ ಹಸ್ತ ಆರಂಭಿಸಲಾಗಿದ್ದು, 15 ಸಾವಿರ ಕೊರೊನಾ ವಾರಿಯರ್ಸ್ ರೆಡಿ ಮಾಡಿದ್ದೇವೆ. ಈಗಾಗಲೇ 8,400 ಆರೋಗ್ಯ ಹಸ್ತ ಕಿಟ್ಗಳನ್ನು ವಿತರಣೆ ಮಾಡಲಾಗಿದ್ದು, ಆರೋಗ್ಯ ಹಸ್ತಕ್ಕೆ ಜನರಿಂದಲೂ ಉತ್ತಮ ಸ್ಪಂದನೆ ದೊರೆತಿದೆ ಎಂದರು.