ಕಲಬುರಗಿ :ಕೆಎಸ್ಆರ್ಟಿಸಿ ಬಸ್ ದರ ಏರಿಕೆ ಖಂಡಿಸಿ ಎಸ್ಯುಸಿಐ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕೆಎಸ್ಆರ್ಟಿಸಿ ಬಸ್ ದರ ಏರಿಕೆ: ಕಲಬುರಗಿಯಲ್ಲಿ ಎಸ್ಯುಸಿಐ ಪ್ರತಿಭಟನೆ - ಕೆಎಸ್ಆರ್ಟಿಸಿ ಬಸ್ ದರ ಏರಿಕೆ ವಿಚಾರ
ಕಲಬುರಗಿ ಕೆಎಸ್ಆರ್ಟಿಸಿ ಬಸ್ ದರ ಏರಿಕೆ ಖಂಡಿಸಿ ಎಸ್ಯುಸಿಐ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

SUCI Protest in Kalaburagi
ಕಲಬುರಗಿಯಲ್ಲಿ ಎಸ್ಯುಸಿಐ ಪ್ರತಿಭಟನೆ
ನಗರದ ಕೇಂದ್ರ ಬಸ್ ನಿಲ್ದಾಣದ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಾರಿಗೆ ಬಸ್ ದರ ಏರಿಸಿ ರಾಜ್ಯ ಸರ್ಕಾರ ಜನಸಾಮಾನ್ಯರ ಗಾಯದ ಮೇಲೆ ಬರೆ ಎಳೆದಿದೆ. ಇಲಾಖೆ ನಷ್ಟ ಸರಿದೂಗಿಸಿಕೊಳ್ಳಲು ಭ್ರಷ್ಟಾಚಾರ, ದುಂದು ವೆಚ್ಚಕ್ಕೆ ಕಡಿವಾಣ ಹಾಕಬೇಕು. ಅದನ್ನು ಬಿಟ್ಟು ಈ ರೀತಿ ದರ ಏರಿಕೆ ಮಾಡೋದು ಸರಿಯಲ್ಲ ಎಂದು ಕಿಡಿಕಾರಿದರು.
ಕೂಡಲೇ ದರ ಏರಿಕೆ ವಾಪಸ್ ಪಡೆಯುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.