ಕಲಬುರಗಿ:ಪೌರತ್ವ ಮಸೂದೆ ತಿದ್ದುಪಡಿ ವಿರೋಧಿಸಿ ಕಲಬುರಗಿ ಬಂದ್ ಕರೆ ನೀಡಿದ್ದ ವೇಳೆ ನಿಷೇಧಾಜ್ಞೆ ಧಿಕ್ಕರಿಸಿ ಬೃಹತ್ ಮೆರವಣಿಗೆ ನಡೆಸಿದ್ದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.
ಕಲಬುರಗಿ ಸೌಹಾರ್ದಯುತ ನಗರ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ಯಾಕೆ..? - ಎಡಿಜಿಪಿ ಅಲೋಕ್ಕುಮಾರ್ ಲೇಟೆಸ್ಟ್ ನ್ಯೂಸ್
ಪೌರತ್ವ ಮಸೂದೆ ತಿದ್ದುಪಡಿ ವಿರೋಧಿಸಿ ಕಲಬುರಗಿ ಬಂದ್ ಕರೆ ನೀಡಿದ್ದ ವೇಳೆ ನಿಷೇಧಾಜ್ಞೆ ಧಿಕ್ಕರಿಸಿ ಬೃಹತ್ ಮೆರವಣಿಗೆ ನಡೆಸಿದ್ದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಕೆಎಸ್ಆರ್ಪಿ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.
ಘಟನೆ ಹಿನ್ನೆಲೆಯಲ್ಲಿ ಕೆ.ಎಸ್.ಆರ್.ಪಿ. ಎಡಿಜಿಪಿ ಅಲೋಕ್ ಕುಮಾರ್ ಕಲಬುರಗಿಗೆ ಭೇಟಿ ನೀಡಿ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿದ್ದಾರೆ. ಈ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅಲೋಕ್ ಕುಮಾರ್, ಕಾನೂನಿನ ಪ್ರಕಾರ ಎಲ್ಲರೂ ನಡೆದುಕೊಳ್ಳಬೇಕು. ಹಿಂಸಾಚಾರ ಕೈಗೆತ್ತಿಕೊಳ್ಳುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಪಿತೂರಿ ಮಾಡುವವರ ಮೇಲೆ ಹದ್ದಿನ ಕಣ್ಣಿಟ್ಟಿದೇವೆ, ಯಾರೂ ಕಾನೂನನ್ನು ಕೈಗೆತ್ತಿಕೊಳ್ಳುವಂತಿಲ್ಲ ಎಂದು ಎಚ್ಚರಿಸಿದ್ದಾರೆ. ನಿಷೇಧಾಜ್ಞೆ ಜಾರಿ ಬಗ್ಗೆ ಸರಿಯಾದ ಮಾಹಿತಿ ಇರದ ಪರಿಣಾಮ ನಿನ್ನೆ ಸಹಸ್ರಾರು ಜನ ಮೆರವಣಿಗೆಗೆ ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ಹೋರಾಟಗಾರರ ಜೊತೆಗೂ ಮಾತನಾಡುತ್ತೇವೆ. ನಗರದಲ್ಲಿ ಶಾಂತಿ ಕಾಪಾಡಲು ಎಲ್ಲ ರೀತಿಯ ಕ್ರಮ ಕೈಗೊಳ್ಳುತ್ತೇವೆ. ಕಲಬುರಗಿಯಲ್ಲಿ ಸೌಹಾರ್ದತೆಯಿದ್ದು, ಯಾವುದೇ ಗದ್ದಲವಾಗಲ್ಲ ಅನ್ನೋ ನಂಬಿಕೆಯಿದೆ ಎಂದು ಅಲೋಕ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.