ಕಲಬುರಗಿ: ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಾಳಗಿ ತಾಲೂಕಿನ ಮೋಘ ಗ್ರಾಮದ ಬಳಿ ನಡೆದಿದೆ.
ಸಾರಿಗೆ ಬಸ್ ಡಿಕ್ಕಿ ಹೊಡೆದು ಬಾಲಕ ಸಾವು - ಕಲಬುರಗಿ ಬಾಲಕ ಸಾವು ಸುದ್ದಿ
ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಾಲಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಮೃತಪಟ್ಟ ಬಾಲಕ
ಭೋಜಪ್ಪ ನೂಲ(11) ಮೃತ ಬಾಲಕ. ಈತ ರಸ್ತೆ ಮೇಲೆ ನಡೆದುಕೊಂಡು ಹೋಗುತ್ತಿರುವಾಗ ರಭಸವಾಗಿ ಬಂದ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗ್ತಿದೆ. ಬಸ್ ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಇನ್ನು, ಈ ಸಂಬಂಧ ರಟಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.