ಸೇಡಂ :ಒಂದು ಕಾಲದಲ್ಲಿ ರಾಷ್ಟ್ರಕೂಟರ ರಾಜಧಾನಿಯಾಗಿ ಮೆರೆದ ತಾಲೂಕಿನ ಮಳಖೇಡ ಗ್ರಾಮದಲ್ಲೀಗ (ಆಗಿನ ಮಾನ್ಯಖೇಟ) ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಕಸದ ರಾಶಿಯಾಗಿ ಮಾರ್ಪಟ್ಟಿದೆ.
ಮಳಖೇಡ ಗ್ರಾಮದಲ್ಲಿ ಎಲ್ಲಿ ನೋಡಿದ್ರೂ ಕಸದ ರಾಶಿ..
ಮಳಖೇಡ ಗ್ರಾಮದಲ್ಲಿ ಎಲ್ಲಿ ನೋಡಿದರಲ್ಲಿ ಕಸದ ರಾಶಿ ಎದ್ದು ಕಾಣುತ್ತಿದ್ದು ಸ್ವಚ್ಛತೆಗೆ ಮುಂದಾಗದ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ವಿರುದ್ಧ ಸ್ಥಳೀಯರು ಹಿಡಿಶಾಪ ಹಾಕುತ್ತಿದ್ದಾರೆ..
ಶಾಲೆಯ ಸುತ್ತಮುತ್ತ ಕಂಡುಬಂದ ಕಸದ ರಾಶಿ
ರಾಜ್ಯದಲ್ಲೇ ಎರಡನೇ ದೊಡ್ಡ ಗ್ರಾಮ ಪಂಚಾಯತ್ ಎಂಬ ಹೆಗ್ಗಳಿಕೆಗೆ ಪಾತ್ರವಾದ ಮಳಖೇಡ ಗ್ರಾಮದಲ್ಲಿ ಈಗ ಎಲ್ಲಿ ನೋಡಿದರಲ್ಲಿ ಕಸದ ರಾಶಿ ಎದ್ದು ಕಾಣುತ್ತಿದೆ. ಚರಂಡಿಗಳನ್ನು ಸ್ವಚ್ಛಗೊಳಿಸದ ಪರಿಣಾಮ ಕೊಳಚೆ ನೀರು ರಸ್ತೆಗಳ ಮೇಲೆ ಹರಿಯುತ್ತಿದೆ.
ಸರ್ಕಾರಿ ಶಾಲೆಯ ಸುತ್ತಲೂ ಕಸ ಕಡ್ಡಿಗಳ ರಾಶಿಯೇ ಕಣ್ಣಿಗೆ ರಾಚುತ್ತಿದೆ. ಇದರಿಂದ ಸಾಂಕ್ರಾಮಿಕ ರೋಗದ ಭೀತಿಯಲ್ಲಿರುವ ಗ್ರಾಮಸ್ಥರು ಗ್ರಾಮ ಪಂಚಾಯತ್ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ.
Last Updated : Oct 23, 2020, 5:09 PM IST