ಕಲಬುರಗಿ:ಲ್ಯಾಪ್‌ಟಾಪ್ ವಿತರಣೆಯಲ್ಲಿ ರಾಜ್ಯ ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆಯ ನೇತೃತ್ವದಲ್ಲಿ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳು ರಸ್ತೆಗಿಳಿದು ಪ್ರತಿಭಟನೆ ನಡೆಸಿದರು.
ಲ್ಯಾಪ್‌ಟಾಪ್ ವಿತರಣೆ ವಿವಾದ: ಸರ್ಕಾರಿ ಕಾಲೇಜ್ ವಿದ್ಯಾರ್ಥಿಗಳಿಂದ ಪ್ರತಿಭಟನೆ
ಲ್ಯಾಪ್‌ಟಾಪ್ ವಿತರಣೆಯಲ್ಲಿ ರಾಜ್ಯ ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಿದರು.
ಲ್ಯಾಪ್‌ಟಾಪ್ ವಿತರಣೆ ವಿವಾದ
ಜಿಲ್ಲಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಷ್ಟೇ ಲ್ಯಾಪ್‌ಟಾಪ್ ನೀಡಿ ದ್ವಿತೀಯ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸದೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು.
ಕೊಡಲೇ ಸರ್ಕಾರ ತಾರತಮ್ಯ ನೀತಿಯನ್ನು ಕೈಬಿಟ್ಟು ಎಲ್ಲಾ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಬೇಕೆಂದು ಒತ್ತಾಯಿಸಿದ್ದಾರೆ.