ಕಲಬುರಗಿ: ಜಿಲ್ಲೆಯ ಹೇರೂರ ಗ್ರಾಮದಲ್ಲಿ ನಡೆಯಬೇಕಿದ್ದ ಸಿಎಂ ಜನತಾ ದರ್ಶನ ಕಾರ್ಯಕ್ರಮ ಮಳೆಯ ಕಾರಣದಿಂದ ರದ್ದಾಯಿತು. ಇದರಿಂದಾಗಿ ಸಿಎಂ ಭೇಟಿ ಮಾಡಿ ತಮ್ಮ ಮನವಿ ಸಲ್ಲಿಸಲು ಆಗಮಿಸಿದ್ದ ಚಿತ್ರದುರ್ಗ ಜಿಲ್ಲೆಯ ಮಹಿಳಾ ಸ್ವಸಹಾಯ ಸಂಘದ ಕಾರ್ಯಕರ್ತೆಯರು ನಿರಾಸೆಯಿಂದ ಹಿಂತಿರುಗಬೇಕಾಯಿತು.
ದೊರೆಗೆ ಮನವಿ ಮಾಡಲು ದೂರದ ಕೋಟೆನಾಡಿನಿಂದ ಬಂದರು, ಬರಿಗೈಲಿ ವಾಪಸಾದ ಮಹಿಳೆಯರು.. - undefined
ಹೇರೂರ ಗ್ರಾಮದಲ್ಲಿ ನಡೆಯಬೇಕಿದ್ದ ಸಿಎಂ ಜನತಾ ದರ್ಶನ ಕಾರ್ಯಕ್ರಮ ಮಳೆಯ ಕಾರಣದಿಂದ ರದ್ದಾಯಿತು. ಇದರಿಂದಾಗಿ ಸಿಎಂ ಭೇಟಿ ಮಾಡಿ ತಮ್ಮ ಮನವಿ ಸಲ್ಲಿಸಲು ಆಗಮಿಸಿದ್ದ ಚಿತ್ರದುರ್ಗ ಜಿಲ್ಲೆಯ ಮಹಿಳಾ ಸ್ವಸಹಾಯ ಸಂಘದ ಕಾರ್ಯಕರ್ತೆಯರು ನಿರಾಸೆಯಿಂದ ಹಿಂತಿರುಗಬೇಕಾಯಿತು.
ಮನವಿ ಸಲ್ಲಿಸಲು ಬಂದವರಿಗೆ ನಿರಾಸೆ
ದೂರದ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಿಂದ ಆಗಮಿಸಿದ ಮಹಿಳಾ ಸ್ವಸಹಾಯ ಸಂಘದ ಕಾರ್ಯಕರ್ತರು ಹಾಗೂ ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆಯ ಫಲಾನುಭವಿಗಳು, ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಸಹಾಯಧನ ಸೇರಿದಂತೆ ವಿವಿಧ ಸೌಲಭ್ಯ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿ ಅನ್ವಯ, ಸೂಕ್ತ ಫಲಾನುಭವಿಗಳಿಗೆ ಸಾಲ ಮಂಜೂರು ಮಾಡುವಂತೆ ಮನವಿ ಸಲ್ಲಿಸಲು ಆಗಮಿಸಿದ್ದರು. ಕಾರ್ಯಕ್ರಮ ರದ್ದಾಗಿರುವುದರಿಂದ ಅನಿರ್ವಾಯ ಎಂಬಂತೆ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮನವಿ ಸಲ್ಲಿಸಿ ಹಿಂದಿರುಗಿದರು.