ಕಲಬುರಗಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಜಿಲ್ಲೆಯ ವಿವಿಧ ತಾಲೂಕಿಗಳಲ್ಲಿನ ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 45 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.
ಹುದ್ದೆ ವಿವರ: ಕಲಬುರಗಿ ಗ್ರಾಮ ಪಂಚಾಯತ್ನಲ್ಲಿ ಖಾಲಿ ಇರುವ 45 ಹುದ್ದೆಗಳ ವಿವರ ಇಂತಿದೆ.
- ಅಫಜಪುರ ತಾಲೂಕು 6
- ಆಳಂದ ತಾಲೂಕು 5
- ಶಹಾಬಾದ್ ತಾಲೂಕು 1
- ಚಿಂಚೋಳಿ ತಾಲೂಕು 4
- ಕಲಬುರಗಿ ತಾಲೂಕು 5
- ಜೇವರ್ಗಿ ತಾಲೂಕು 4
- ಯಡ್ರಾಮಿ ತಾಲೂಕು 4
- ಸೇಡಂ ತಾಲೂಕು 4
- ಕಮಲಾಪೂರ ತಾಲೂಕು 4
ಶೈಕ್ಷಣಿಕ ಅರ್ಹತೆ:ಅಭ್ಯರ್ಥಿಗಳು ದ್ವಿತೀಯ ಪದವಿ ಪೂರ್ವ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ನಲ್ಲಿ ಪ್ರಮಾಣ ಪತ್ರ ಪಡೆದಿರತಕ್ಕದ್ದು. ಕನಿಷ್ಟ ಮೂರು ತಿಂಗಳ ಮಾನ್ಯತೆ ಪಡೆದ ಸಂಸ್ಥೆಯಿಂದ ಕಂಪ್ಯೂಟರ್ ಕೋರ್ಸ್ ಉತ್ತೀರ್ಣರಾಗಿರಬೇಕು.
ವಿಶೇಷ ಸೂಚನೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿಯಾಗಿರಬೇಕು.
ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿ ಹೊಂದಿರಬೇಕು. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ.ಜಾತಿ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 40 ವರ್ಷದವರೆಗೆ ವಯೋಮಿತಿ ಸಡಿಲಿಕೆ ನಡೆಸಲಾಗುವುದು.
ನೇಮಕಾತಿ: ಮೆರಿಟ್ ಆಧಾರದ ಮೇಲೆ ದಾಖಲಾತಿ ಪರಿಶೀಲನೆ ನಡೆಸಿ ಅಭ್ಯರ್ಥಿಗಳ ನೇಮಕ ನಡೆಸಲಾಗುವುದು.