ಕರ್ನಾಟಕ

karnataka

ETV Bharat / state

ಅತ್ಯಾಚಾರಿಗೆ ಜೀವಾವದಿ ಶಿಕ್ಷೆ ವಿಧಿಸಿದ ಸೆಷನ್ಸ್​ ಕೋರ್ಟ್​ - kalburgi Rape case judgement

ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ದನದ ಕೊಟ್ಟಿಗೆಗೆ ಕರೆದೊಯ್ದು ಬಲವಂತವಾಗಿ ಅತ್ಯಾಚಾರ ಎಸೆಗಿದ್ದ ಆರೋಪಿಗಳಿಗೆ ಇಲ್ಲಿನ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಹೊರಡಿಸಿದೆ.

ಸೆಷನ್ಸ್​ ನ್ಯಾಯಾಲಯ

By

Published : Nov 5, 2019, 7:59 AM IST

ಕಲಬುರಗಿ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ದನದ ಕೊಠಡಿಗೆ ಕರೆದೊಯ್ದು ಬಲವಂತವಾಗಿ ಅತ್ಯಾಚಾರವೆಸಗಿದ ಆರೋಪಿಗಳಿಗೆ ಇಲ್ಲಿನ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆಯ ತೀರ್ಪು ಹೊರಡಿಸಿದೆ.

ವಾಡಿ ಪೊಲೀಸ್​​ ಠಾಣೆ ವ್ಯಾಪ್ತಿಗೆ ಬರುವ ಇಂಗಳಗಿ ಗ್ರಾಮದ ನಿವಾಸಿ ಭೀಮಾಶಂಕರ ಮಲ್ಲಪ್ಪ ಎಂಬಾತ ಅದೇ ಗ್ರಾಮದ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವುದಾಗಿ ನಂಬಿಸಿ ದನದ ಕೊಟ್ಟಿಗೆಗೆ ಕರೆದೊಯ್ದು ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಆರೋಪಿಗೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶ ಗೋಪಾಲಪ್ಪ ಎಸ್. ಕಠಿಣ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಐಪಿಸಿ ಸೆಕ್ಷನ್ 376 ಹಾಗೂ 450 ಪೋಕ್ಸೊ ಕಾಯ್ದೆಯ ಅನ್ವಯ ಕಠಿಣ ಜೀವಾವಧಿ ಶಿಕ್ಷೆ ವಿಧಿಸಿದ್ದು. ಜಿಲ್ಲಾ ಕಾನೂನು ನೆರವು ಸಮಿತಿ ವತಿಯಿಂದ 5 ಲಕ್ಷ ಪರಿಹಾರ ನೀಡುವಂತೆ ಆದೇಶ ನೀಡಿದ್ದಾರೆ.

ABOUT THE AUTHOR

...view details