ಕಲಬುರಗಿ:ಮಳೆ ನೀರಿನಲ್ಲಿ ಕೊಚ್ಚಿಹೋಗುತ್ತಿದ್ದ ವ್ಯಕ್ತಿಯನ್ನು ಸ್ಥಳೀಯರು ರಕ್ಷಣೆ ಮಾಡಿರುವ ಘಟನೆ ಆಳಂದ ತಾಲೂಕಿನಲ್ಲಿ ನಡೆದಿದೆ. ಕಳೆದೆರಡು ದಿನಗಳಿಂದ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ಇಂದು ಕೂಡ ವರುಣನ ಅಬ್ಬರ ಮುಂದುವರಿದಿದೆ.
ಮಳೆ ನೀರಿನಲ್ಲಿ ಬೈಕ್ ಸಮೇತ ಕೊಚ್ಚಿ ಹೋದ ವ್ಯಕ್ತಿ.. ಸ್ಥಳೀಯರಿಂದ ರಕ್ಷಣೆ - rain fall in uttar karnataka
ಮಳೆ ನೀರಿನಲ್ಲಿ ಕೊಚ್ಚಿಹೋಗುತ್ತಿದ್ದ ವ್ಯಕ್ತಿಯನ್ನು ಸ್ಥಳೀಯರು ರಕ್ಷಣೆ ಮಾಡಿರುವ ಘಟನೆ ಆಳಂದ ತಾಲೂಕಿನಲ್ಲಿ ನಡೆದಿದೆ. ಕಳೆದೆರಡು ದಿನಗಳಿಂದ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ಇಂದು ಕೂಡ ವರುಣನ ಅಬ್ಬರ ಮುಂದುವರಿದಿದೆ.
ಮಳೆ ನೀರಿನಲ್ಲಿ ಬೈಕ್ ಸಮೇತ ಕೊಚ್ಚಿ ಹೋದ ವ್ಯಕ್ತಿ...ಸ್ಥಳಿಯರಿಂದ ರಕ್ಷಣೆ
ಧಾರಾಕಾರ ಮಳೆಗೆ ಆಳಂದ ತಾಲೂಕಿನಲ್ಲಿ ಹಳ್ಳ- ಕೊಳ್ಳಗಳು ತುಂಬಿ ಹರಿಯುತ್ತಿವೆ. ನಿಂಬಾಳ-ಯಳಸಂಗಿ ಮಾರ್ಗ ಮಧ್ಯದ ಹಳ್ಳ ಕೂಡ ತುಂಬಿ ಹರಿಯುತ್ತಿದ್ದು, ಹಳ್ಳದ ಸೇತುವೆ ದಾಟುವಾಗ ಕೊಡ ಮಾರುವ ವ್ಯಕ್ತಿ ಬೈಕ್, ಕೊಡಗಳ ಸಮೇತ ನೀರಿನ ರಭಸಕ್ಕೆ ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ.
ಈಜು ಬಲ್ಲವನಾಗಿದ್ದರಿಂದ ಸುಮಾರು 500 ಮೀಟರ್ ದೂರದವರೆಗೂ ಈಜಿ ನದಿ ದಂಡೆಯ ಬಳಿ ಇದ್ದ ಬೇಲಿಯ ಸಹಾಯದಿಂದ ಹಳ್ಳದಲ್ಲಿ ಸಿಲುಕಿಕೊಂಡಿದ್ದ. ಬಳಿಕ ಸ್ಥಳದಲ್ಲಿಯೇ ಇದ್ದ ಸ್ಥಳೀಯರು ಆತನನ್ನು ರಕ್ಷಣೆ ಮಾಡಿದ್ದಾರೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ವ್ಯಕ್ತಿ ಪಾರಾಗಿದ್ದು, ಬೈಕ್ ಮತ್ತು ಕೊಡಗಳು ನೀರು ಪಾಲಾಗಿವೆ.