ಕಲಬುರಗಿ:ಲಾರಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಅಂಗಡಿಗಳ ಮೇಲೆ ಪಲ್ಟಿಯಾದ ಘಟನೆ ಕಲಬುರ್ಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಕೊಲ್ಲೂರು ಗ್ರಾಮದಲ್ಲಿ ನಡೆದಿದೆ.
ನಿಯಂತ್ರಣ ತಪ್ಪಿ ಪಲ್ಟಿಯಾದ ಲಾರಿ, ಅಂಗಡಿ ನಜ್ಜುಗುಜ್ಜು.. ಭಯದಿಂದ ಚಾಲಕ ಪಾರಾರಿ - Kolluru lorry trun over
ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆ ಬದಿಯ ಅಂಗಡಿಗಳ ಮೇಲೆ ಪಲ್ಟಿಯಾದ ಘಟನೆ ಕಲಬುರ್ಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಕೊಲ್ಲೂರು ಗ್ರಾಮದಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ.
ಲಾರಿ ಪಲ್ಟಿ
ವೇಗವಾಗಿ ಚಲಿಸುತ್ತಿದ್ದ ಲಾರಿ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಅಂಗಡಿಗಳ ಮೇಲೆ ಪಲ್ಟಿಯಾಗಿದೆ. ಲಾರಿ ಬಿದ್ದ ರಭಸಕ್ಕೆ ಹೋಟೆಲ್ ಮತ್ತು ಪಾನ್ ಶಾಪ್ ನಜ್ಜುಗುಜ್ಜಾಗಿವೆ. ರಾತ್ರಿವೇಳೆ ಪಲ್ಟಿಯಾಗಿದ್ದರಿಂದ ಅದೃಷ್ಟವಶಾತ್ ಯಾವುದೇ ಜೀವಹಾನಿಯಾಗಿಲ್ಲ. ಘಟನೆ ನಡೆಯುತ್ತಿದ್ದಂತೆಯೇ ಚಾಲಕ ಮತ್ತು ಕ್ಲೀನರ್ ಲಾರಿಯನ್ನು ಬಿಟ್ಟು ಪರಾರಿಯಾಗಿದ್ದಾರೆ. ಮಿರಿಯಾಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.