ಕಲಬುರಗಿ: ಬಿಜೆಪಿಯವರು ತಮಗೆ ಅನುಕೂಲ ಆಗುವ ರೀತಿಯಲ್ಲಿ ದಿ ಕಾಶ್ಮೀರಿ ಫೈಲ್ಸ್ ಚಿತ್ರ ತೆಗೆಸಿದ್ದಾರೆ. ಚಿತ್ರ ಚೆನ್ನಾಗಿದ್ದರೆ ಜನ ನೋಡುತ್ತಾರೆ, ಆದರೆ ಪ್ರಧಾನಿ ಪ್ರಮೋಟ್ ಮಾಡೋದು ಸರಿನಾ? ಎಂದು ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದರು.
'ಕಾಶ್ಮೀರಿ ಫೈಲ್ಸ್' ಚಿತ್ರವನ್ನು ಬಿಜೆಪಿಗೆ ಅನುಕೂಲಕರ ರೀತಿಯಲ್ಲಿ ತೆಗೆಯಲಾಗಿದೆ: ಖರ್ಗೆ - ಕಲಬುರ್ಗಿಯಲ್ಲಿ ಬಿಜೆಪಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ
ಕಾಶ್ಮೀರಿ ಪಂಡಿತರಿಗೆ ಅನ್ಯಾಯವಾದರೆ ಅವರಿಗೆ ನ್ಯಾಯ ಒದಗಿಸುವ ಕೆಲಸ ಮಾಡುವುದನ್ನು ಬಿಟ್ಟು ಮಕ್ಕಳಲ್ಲಿ ವಿಷ ಬೀಜ ಬಿತ್ತುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ಚುನಾವಣೆವರೆಗೆ ಈ ರೀತಿಯ ಚಿತ್ರಗಳು ಬರುತ್ತವೆ ಎಂದು ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದರು.
ನಗರದಲ್ಲಿ ಮಾತನಾಡಿದ ಅವರು, ತಾವಾಗಿಯೇ ಜನ ಚಿತ್ರ ನೋಡಿದರೆ ಯಾರ ಅಭ್ಯಂತರವೂ ಇಲ್ಲ. ಆದರೆ ಬಿಜೆಪಿಯವರು ದೇಶದಲ್ಲಿ ಬೆಂಕಿ ಹಚ್ಚಿ, ವಿಭಜನೆ ಮಾಡೋ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ಧಾಳಿ ನಡೆಸಿದರು.
ದೇಶಕ್ಕಾಗಿ ಬಲಿದಾನ ಮಾಡಿದವರ ಚಿತ್ರ ತೆಗೆದು ತೋರಿಸಲಿ. ಬಿಜೆಪಿಯವರು ಸ್ವಾತಂತ್ರ್ಯಕ್ಕಾಗಿ ಯಾರೂ ಬಲಿದಾನ ಮಾಡಿಲ್ಲ. ಅವರು ದೇಶಕ್ಕೆ ಸ್ವತಂತ್ರ ತಂದುಕೊಟ್ಟವರಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ. ಕಾಶ್ಮೀರಿ ಪಂಡಿತರಿಗೆ ಅನ್ಯಾಯವಾದರೆ ಅವರಿಗೆ ನ್ಯಾಯ ಒದಗಿಸುವ ಕೆಲಸ ಮಾಡುವುದನ್ನು ಬಿಟ್ಟು, ಮಕ್ಕಳಲ್ಲಿ ವಿಷ ಬೀಜ ಬಿತ್ತುವ ಕೆಲಸವನ್ನು ಮಾಡುತ್ತಿದ್ದಾರೆ. ಚುನಾವಣೆವರೆಗೆ ಈ ರೀತಿಯ ಚಿತ್ರಗಳು ಬರುತ್ತವೆ ಎಂದು ಟೀಕಿಸಿದರು.