ಕರ್ನಾಟಕ

karnataka

ETV Bharat / state

11 ಬಾರಿ ಗೆದ್ದಿದ್ದೇನೆ, ಇನ್ನೊಂದು ಬಾರಿ ಗೆಲ್ಲೋಕಾಗಲ್ವಾ? - activists

ನಿನ್ನೆ ತಮ್ಮ ಹಕ್ಕನ್ನು ಚಲಾಯಿಸಿದ ಲೋಕಸಭಾ ಕಾಂಗ್ರೆಸ್​ ಪಕ್ಷದ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಇಂದು ಫುಲ್​ ರಿಲ್ಯಾಕ್ಸ್​ ಮೂಡ್​ನಲ್ಲಿದ್ದಾರೆ. ಆವರಣದಲ್ಲಿ ಕುಳಿತು ಹರಟೆ ಹೊಡೆಯುತ್ತಾ ತಮ್ಮ ನಿವಾಸಕ್ಕೆ ಆಗಮಿಸುತ್ತಿರುವ ಕಾರ್ಯಕರ್ತರೊಂದಿಗೆ ಸೋಲು ಗೆಲುವಿನ ಬಗ್ಗೆ ಮಾತುಕತೆ ನಡೆಸಿದರು.

ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸುತ್ತಿರುವ ಮಲ್ಲಿಕಾರ್ಜುನ ಖರ್ಗೆ

By

Published : Apr 24, 2019, 6:29 PM IST

ಕಲಬುರಗಿ: ಮೀಸಲು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ನಿನ್ನೆ ಮತದಾನ ಮುಗಿಸಿದ್ದು, ಇಂದು ಬೆಳಿಗ್ಗೆಯಿಂದ ತಮ್ಮ ಲುಂಬಿನಿ ನಿವಾಸದಲ್ಲಿ ಫುಲ್​ ರಿಲ್ಯಾಕ್ಸ್​ ಮೂಡ್​​​ನಲ್ಲಿದ್ದಾರೆ. ಏನಪ್ಪ, ನಿಮ್ಮೂರಲ್ಲಿ ಮತದಾನ ಹೇಗಾಗಿದೆ ಅಂತ ಹಳ್ಳಿಗಳಿಂದ ತಮ್ಮ ನಿವಾಸಕ್ಕೆ ಆಗಮಿಸುತ್ತಿರುವ ಮುಖಂಡರು, ಕಾರ್ಯಕರ್ತರೊಂದಿಗೆ ಸೋಲು ಗೆಲುವಿನ ಬಗ್ಗೆ ಮಾತುಕತೆ ನಡೆಸಿದರು.

ಲೋಕಸಭೆ ಚುನಾವಣೆ ವಿಚಾರದ ಕುರಿತು ಪ್ರತಿಕ್ರಿಸಿಯಿದ ಖರ್ಗೆ, 11 ಬಾರಿ ಕಾಂಗ್ರೆಸ್​ ಅಭ್ಯರ್ಥಿಯಾಗಿ ಗೆದ್ದಿದ್ದೇನೆ. ಇನ್ನೊಂದು ಬಾರಿ ಕಾಂಗ್ರೆಸ್ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಾನು ಎಲ್ಲೆಲ್ಲಿ ಹೋಗಿದ್ದೇನೆ ಅಲ್ಲೆಲ್ಲಾ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಹೀಗಾಗಿ ಕಾಂಗ್ರೆಸ್​ ಪಕ್ಷ ಗೆಲ್ಲಲಿದೆ ಎಂದರು.

ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸುತ್ತಿರುವ ಮಲ್ಲಿಕಾರ್ಜುನ ಖರ್ಗೆ

ಕೆ.ಬಿ.ಶಾಣಪ್ಪ ಸೇರಿದಂತೆ ಹಲವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರವಾಗಿ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರವಾಗಿ ಮತದಾನ ಮಾಡಿದವರಿಗೆಲ್ಲ ಧನ್ಯವಾದ ತಿಳಿಸಿದರು. ಈ ವೇಳೆ ನಗುನಗುತ್ತಾ ನಿರಾಯಾಸವಾಗಿ ಮನೆಯ ಆವರಣದಲ್ಲಿ ಕುಳಿತು ಖರ್ಗೆ ಹರಟೆ ಹೊಡೆಯುತ್ತಿದ್ದ ದೃಶ್ಯ ಕಂಡುಬಂತು.

ಇನ್ನು ಬಿಜೆಪಿ ಅಭ್ಯರ್ಥಿ ಉಮೇಶ್​ ಜಾಧವ್​ ಅವರ ರಾಜೀನಾಮೆಯಿಂದ ತೆರುವಾದ ಚಿಂಚೋಳಿ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ವಿಷಯವಾಗಿ ಬೆಂಗಳೂರಿಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.

ABOUT THE AUTHOR

...view details