ಕಲಬುರಗಿ:ಹಾನಗಲ್ ಹಾಗೂ ಸಿಂಧಗಿ ಉಪ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಇದೇ ಮೊದಲ ಬಾರಿಗೆ ಎರಡೂ ಕಡೆ ಅಲ್ಪಸಂಖ್ಯಾತ ಅಭ್ಯರ್ಥಿ ಹಾಕಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಕಲಬುರಗಿ ನಗರದಲ್ಲಿ ಮಾತನಾಡಿದ ಅವರು, ಅಲ್ಪಸಂಖ್ಯಾತ ಅಭ್ಯರ್ಥಿ ಹಾಕಿದ್ರೆ ಕಾಂಗ್ರೆಸ್ಗೆ ಹಿನ್ನಡೆ ಅಂತ ತಿಳ್ಕೊಂಡ್ರೆ ಅದು ತಪ್ಪು ಕಲ್ಪನೆ. ಮುಸ್ಲಿಂ ಜನಾಂಗ ಐಡಲಾಜಿಕಲ್ ಬೆಸಿಸ್ ಮೇಲೆ ಮತದಾನ ಮಾಡುತ್ತಾರೆ. ಕಾಂಗ್ರೆಸ್ ಜಾತ್ಯತೀತ ತತ್ವದ ಮೇಲೆ ನಡೆಯುತ್ತೆ. ಹಾಗಾಗಿ ಈ ಎರಡೂ ಕ್ಷೇತ್ರದ ಜನ ಕಾಂಗ್ರೆಸ್ಗೆ ಆಶೀರ್ವಾದ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
'ಮುಸ್ಲಿಂ ಅಭ್ಯರ್ಥಿ ಹಾಕಿದ್ರೆ ನಮಗೆ ಹಿನ್ನಡೆಯಾಗಲಿದೆ ಎಂದುಕೊಂಡಿದ್ರೆ ಅದು ತಪ್ಪು' ದೇಶದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ವಿಚಾರವಾಗಿ ಪ್ರತಿಕ್ರಿಯಿಸಿ, ನಮ್ಮ ಕಾಲದಲ್ಲಿ 60 ರೂಪಾಯಿಗೆ ಪೆಟ್ರೋಲ್ ದೊರಕುತಿತ್ತು. ಇದೀಗ ನೂರರ ಗಡಿ ದಾಟಿದರೂ ಯಾರೂ ಕೇಳುತ್ತಿಲ್ಲ. ಕಚ್ಚಾ ತೈಲ ಬೆಲೆ ಕಡಿಮೆ ಇದ್ರು ದೇಶದಲ್ಲಿ ಪೆಟ್ರೋಲ್ ಡೀಸೆಲ್ ನೂರರ ಗಡಿ ದಾಟುತ್ತಿದೆ. ಇದರಿಂದ ಸಾಮಾನ್ಯ ಜನರಿಗೆ ಹೊರೆಯಾಗುತ್ತಿದೆ ಎಂದರು.
ಛತ್ತೀಸ್ಗಢದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಪ್ರತಿಕ್ರಿಯಿಸಿ, ಅಲ್ಲಿ ಸಿಎಂ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ಪಂಜಾಬ್ ಕಾಂಗ್ರೆಸ್ನಲ್ಲಿ ಎಲ್ಲವೂ ಸರಿಯಾಗಿದೆ. ದೇಶದಲ್ಲೇ ಮೊದಲ ಬಾರಿಗೆ ದಲಿತ ಮುಖ್ಯಮಂತ್ರಿ ಮಾಡಿದ್ದಾರೆ. ಎಲ್ಲರೂ ಅವರಿಗೆ ಸನ್ಮಾನ, ಸಹಕಾರ ನೀಡಬೇಕು ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ. ಹೈಕಮಾಂಡ್ ನಿರ್ಧಾರವೇ ಅಂತಿಮ ನಿರ್ಧಾರ ಎಂದು ಹೇಳಿದರು.
ಇದನ್ನೂ ಓದಿ:ಪೊಲೀಸರನ್ನು ಕೇಸರೀಕರಣ ಮಾಡಿರುವುದಕ್ಕೆ ಆಕ್ಷೇಪಿಸಿದ್ದೇನೆ ಅಷ್ಟೇ: ಸಿದ್ದರಾಮಯ್ಯ